Advertisement

ಶಾಹೀನ್‌ನಿಂದ 5 ಕೋಟಿ ವಿದ್ಯಾರ್ಥಿ ವೇತನ

06:16 PM Oct 21, 2020 | Suhan S |

ಬೀದರ: ನಗರದ ಶಾಹೀನ್‌ ಶಿಕ್ಷಣ ಸಂಸ್ಥೆ ಪ್ರಸಕ್ತ ಸಾಲಿನ ನೀಟ್‌ ದೀರ್ಘ‌ ಕಾಲದ ರಿಪೀಟರ್‌ ತರಬೇತಿ ಹಾಗೂ ಇತರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 5 ಕೋಟಿ ರೂ. ವಿದ್ಯಾರ್ಥಿ ವೇತನಪ್ರಕಟಿಸಿದೆ.

Advertisement

ಕೋವಿಡ್ ಅತಿವೃಷ್ಟಿಯಿಂದ ಪಾಲಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ನೀಟ್‌ನಲ್ಲಿ ರಾಷ್ಟ್ರಮಟ್ಟದಲ್ಲಿ 9ನೇ ಹಾಗೂ ಕರ್ನಾಟಕಕ್ಕೆ ಮೊದಲ ರ್‍ಯಾಂಕ್‌ ಗಳಿಸಿದ ಸಂಭ್ರಮದಲ್ಲಿರುವ ಸಂಸ್ಥೆಯು ವಿದ್ಯಾರ್ಥಿ ವೇತನದ ಮೂಲಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ನಿರ್ಧರಿಸಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ| ಅಬ್ದುಲ್‌ ಖದೀರ್‌ ತಿಳಿಸಿದ್ದಾರೆ.

ಸಂಸ್ಥೆಯ ದೇಶದ ಎಲ್ಲ ಶಾಖೆಗಳಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆವಿಶೇಷ ಆದ್ಯತೆ ಕೊಡಲಾಗುವುದು. ರಿಪೀಟರ್‌ಗಳಿಗೆ ನೀಟ್‌ನಲ್ಲಿ ಪಡೆದ ಅಂಕ ಆಧರಿಸಿ ವಿದ್ಯಾರ್ಥಿ ವೇತನ ಕಲ್ಪಿಸಲಾಗುವುದು. ಸಂಸ್ಥೆಯ ಬೀದರಶಾಖೆಗೆ ಮಾತ್ರ ಅನ್ವಯಿಸುವಂತೆಪಿಯುಸಿ ಕಲಾ, ವಾಣಿಜ್ಯ, ಬಿ.ಎ., ಬಿ.ಎಸ್ಸಿ, ಬಿ.ಕಾಂ ಪ್ರವೇಶ ಹಾಗೂ ಯುಪಿಎಸ್‌ಸಿ ಪರೀಕ್ಷೆಗಳ ತರಬೇತಿ ಪಡೆಯುವವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ಹೇಳಿದ್ದಾರೆ.  ಕೋವಿಡ್ ಕಾರಣದಿಂದ ಪಾಲಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ನೀಟ್‌ ತರಬೇತಿ ಸಂಪೂರ್ಣ ಉಚಿತವಾಗ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ವೆಬ್‌ಸೈಟ್‌ www.shaheengroup.org ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಬಹುದು. ನೀಟ್‌ ದೀರ್ಘ‌ ಕಾಲದ ರಿಪೀಟರ್‌ ತರಬೇತಿ ಪ್ರವೇಶಕ್ಕೆ ನ.1 ಕೊನೆ ದಿನ. ಮಾಹಿತಿಗೆ ಟೊಲ್‌ ಫ್ರೀ ಸಂಖ್ಯೆ 18001216235ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. 32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾಗಿರುವ ಶಾಹೀನ್‌ ಶಿಕ್ಷಣ ಸಂಸ್ಥೆಯಲ್ಲಿ ಇಂದು 17 ಸಾವಿರಕ್ಕೂ

ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಒಟ್ಟು 42 ಶಾಖೆ ಹೊಂದಿದೆ. ಗುಣಮಟ್ಟದ ಶಿಕ್ಷಣದ ಮೂಲಕ ದ್ವಿತೀಯ ಪಿಯುಸಿ, ಸಿಇಟಿ, ನೀಟ್‌ ಫಲಿತಾಂಶದಲ್ಲಿ ರಾಜ್ಯ, ರಾಷ್ಟ್ರದ ಗಮನ ಸೆಳೆದಿದೆ ಎಂದು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next