Advertisement

ಕಡಲ್ಕೊರೆತ ತಡೆಗೆ 3 ಕರಾವಳಿ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ: ಹೆಬ್ಬಾಳ್ಕರ್

03:36 PM Jun 12, 2024 | Team Udayavani |

ಉಡುಪಿ: ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ತಿಳಿಸಿದ್ದಾರೆ.

Advertisement

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ ಕಡಲ್ಕೊರೆತ ವಿಚಾರಕ್ಕೆ ಸಂಬಂಧಿಸಿ ಹಿಂದಿನ 10 ಕೋಟಿ ರೂ. ಬಿಲ್ ಬಾಕಿ ಇದೆ ಅದನ್ನೂ ಬಿಡುಗಡೆ ಮಾಡಲಾಗುತ್ತದೆ. ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರಕಾರದಿಂದ ಮಾತ್ರ ಪರಿಹಾರ ನೀಡುವುದು ಸಾಧ್ಯವಿಲ್ಲ.ಕೇಂದ್ರ ಮತ್ತು ರಾಜ್ಯ ಸರಕಾರ’ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕಾಗಿದೆ’ ಎಂದರು.

ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ‘ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ,  ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ, ಬಾಗುವುದೂ ಇಲ್ಲ” ಎಂದರು.

‘ಉಡುಪಿ ಜಿಲ್ಲೆಯಲ್ಲಿ ಬಸ್ ಕೊರತೆ ವಿಚಾರ ಗಮನಕ್ಕೆ ಬಂದಿದ್ದು, ಕೊರತೆ ನೀಗಿಸಲು ಸಾರಿಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. 3 ಸಾವಿರ ಸಾವಿರ ಬಸ್ ಗಳ ಖರೀದಿ ಆಗಿದ್ದು ಅವುಗಳ ಪೈಕಿ ಕೆಲವನ್ನು ಇಲ್ಲಿಗೆ ತರುವ ಪ್ರಯತ್ನ ಮಾಡುತ್ತೇವೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next