Advertisement

ಕುಡಿಯುವ ನೀರಿಗಾಗಿ ಐದು ಕೋಟಿ ರೂ. ಬಿಡುಗಡೆಗೆ ಸೂಚನೆ

05:39 PM Jul 15, 2022 | Team Udayavani |

ರಾಯಚೂರು: ನಗರಕ್ಕೆ ಕುಡಿಯುವ ನೀರು ಪೂರೈಕೆ ಯೋಜನೆಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಐದು ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ತಿಳಿಸಿದರು.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಕಲುಷಿತ ನೀರಿನಿಂದ ಆಗಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಯೋಗಾಲಯದಲ್ಲಿ ಕಲುಷಿತ ನೀರಿನ ಪರಿಶೀಲನೆ ನಂತರ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಪ್ರಯೋಗಾಲಯವನ್ನೂ ಆರಂಭಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಏಮ್ಸ್‌ ಸ್ಥಾಪಿಸುವಂತೆ ಒತ್ತಾಯಿಸಿ ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಜಿಲ್ಲೆಯಿಂದ ಹೋರಾಟಗಾರ ನಿಯೋಗ ಕರೆತರುವ ವಿಚಾರವನ್ನು ಅವರೊಂದಿಗೆ ಚರ್ಚಿಸಲಾಗಿದೆ. ಮುಖ್ಯಮಂತ್ರಿಗಳು ಭೇಟಿಗೆ ದಿನಾಂಕ ನೀಡಿದಾಗ ಶೀಘ್ರದಲ್ಲಿ ಜಿಲ್ಲೆಯಿಂದ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು. ಈ ಬಗ್ಗೆ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ತಿಳಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಗ್ರಾಮಗಳ ಸ್ಥಳಾಂತರ ಸೇರಿದಂತೆ ಜನರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ನದಿ ಪಾತ್ರದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next