Advertisement

ಇಂದಿನಿಂದ 5 ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್‌ ಘೋಷಣೆ

09:30 PM Jun 19, 2022 | Team Udayavani |

ಬೆಂಗಳೂರು: ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶ ಸಹಿತ ರಾಜ್ಯಾದ್ಯಂತ ಜೂ. 20ರಿಂದ 24ರ ವರೆಗೆ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

Advertisement

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ ಪ್ರದೇಶದಲ್ಲಿ ದುರ್ಬಲವಾಗಿದೆ. ಬೆಳಗಾವಿ, ಬೆಂಗಳೂರು, ಬೀದರ್‌, ಹಾಸನ ಸಹಿತ ಹಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ಸೋಮವಾರದಿಂದ 5 ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಬೀಳುವ ಸಾಧ್ಯತೆಗಳಿವೆ.

ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ವಿಜಯಪುರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 5 ದಿನ ಮಳೆಯ ಬೀಳುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next