Advertisement
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜ್ಯದಲ್ಲಿ ಒಬ್ಬರಾದ ಮೇಲೊಬ್ಬರಂತೆ ಪ್ರಚಾರ ನಡೆಸಲಿದ್ದಾರೆ. ಸಮಾವೇಶ ಹಾಗೂ ರೋಡ್ ಶೋ ಮೂಲಕ ಕೇಸರಿ ಕಹಳೆ ಮೊಳಗಿಸಲಿದ್ದಾರೆ.
ಏ.23 ಹಾಗೂ 24ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ 2 ದಿನಗಳ ಕಾಲ ರಾಜ್ಯದಲ್ಲಿ ಪ್ರಚಾರ ನಡೆಸುವರು. ಏ.23ರಂದು ಬೆಳಗ್ಗೆ 10 ಗಂಟೆಗೆ ಯಶವಂತಪುರದಲ್ಲಿ ರೋಡ್ ಶೋ, 12.30ಕ್ಕೆ ಯಲಹಂಕದಲ್ಲಿ ಸಾರ್ವಜನಿಕ ಸಭೆ, 4 ಗಂಟೆಗೆ ಬೊಮ್ಮನಹಳ್ಳಿಯಲ್ಲಿ ರೋಡ್ ಶೋ, 7 ಗಂಟೆಗೆ ಮಹದೇವಪುರದಲ್ಲಿ ರೋಡ್ ಶೋ ನಡೆಸಲಿದ್ದಾರೆ. 24ರಂದು ಬೆಳಗ್ಗೆ 10 ಗಂಟೆಗೆ ಚಿಕ್ಕಮಗಳೂರಿನಲ್ಲಿ ಸಭೆಯಲ್ಲಿ ಭಾಗವಹಿಸಿ, 1 ಗಂಟೆಗೆ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಳ್ಳುವರು. 5 ಗಂಟೆಗೆ ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸುವರು ಎಂದರು.
Related Articles
ಇನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಏ.24ರ ಬೆಳಗ್ಗೆ 10 ಗಂಟೆಗೆ ಬೃಹತ್ ರೋಡ್ ಶೋ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಮಡಿಕೇರಿಯಲ್ಲಿ, ಸಂಜೆ 4 ಗಂಟೆಗೆ ಉಡುಪಿಯ ಮಲ್ಪೆ ಕಡಲ ತಟದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. 21ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, 24ರಂದು ರಾಜನಾಥ್ ಸಿಂಗ್ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
Advertisement
ಈ ಸಂದರ್ಭದಲ್ಲಿ ಬಿಜೆಪಿ ಸಂಕಲ್ಪ ಪತ್ರದ ಕನ್ನಡ ಅನುವಾದ, ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಕಾರ್ಯಕ್ರಮದ ವಿಡಿಯೋ ಬಿಡುಗಡೆ ಮಾಡಲಾಯಿತು.
ಏ.20 – ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಏ. 21 – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಚಾರ ಸಭೆ.
ಏ. 23 – ಯಶವಂತಪುರ, ಬೊಮ್ಮನಹಳ್ಳಿ, ಮಹದೇವಪುರದಲ್ಲಿ ಅಮಿತ್ ಶಾ ರೋಡ್ ಶೋ, ಯಲಹಂಕದಲ್ಲಿ ಸಾರ್ವಜನಿಕ ಸಭೆ
ಏ. 24 – ಚಿಕ್ಕಮಗಳೂರು, ತುಮಕೂರಲ್ಲಿ ಅಮಿತ್ ಶಾ ಸಾರ್ವಜನಿಕ ಸಭೆ, ಹುಬ್ಬಳ್ಳಿಯಲ್ಲಿ ರೋಡ್‌ಶೋ. ರಾಜರಾಜೇಶ್ವರಿ ನಗರದಲ್ಲಿ ಯೋಗಿ ಆದಿತ್ಯನಾಥ್ ರೋಡ್‌ಶೋ. ಮಡಿಕೇರಿ, ಉಡುಪಿಯಲ್ಲಿ ಯೋಗಿ ಸಾರ್ವಜನಿಕ ಸಭೆ.