Advertisement

ಕೇರಳದಿಂದ ಗೋವಾಕ್ಕೆ ಆಗಮಿಸುವವರಿಗೆ 5 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಿದ ಸರ್ಕಾರ

03:49 PM Sep 13, 2021 | Team Udayavani |

ಪಣಜಿ : ಗೋವಾ ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂ ಕಾಲಾವಧಿಯನ್ನು ಸರ್ಕಾರ ಇನ್ನೂ ಒಂದು ವಾರಗಳ ಕಾಲ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಸಪ್ಟೆಂಬರ್ 20 ರವರೆಗೆ ವಿಸ್ತರಣೆ ಮಾಡಲಾಗಿದೆ.  ಇಷ್ಟೇ ಅಲ್ಲದೆಯೇ ಕೇರಳದಿಂದ ಗೋವಾಕ್ಕೆ ಆಗಮಿಸುವ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ 5 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಇದನ್ನೂ ಓದಿ : “ಇನ್ನೂ ಸಮಯ ಇದೆ”: ಕಲಬುರಗಿ ಪಾಲಿಕೆ ಬೆಂಬಲ ವಿಚಾರದಲ್ಲಿ ಕುಮಾರಸ್ವಾಮಿ ನಡೆ ಇನ್ನೂ ನಿಗೂಢ

ಕೇರಳದಿಂದ ಗೋವಾಕ್ಕೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರಿಗೆ ಕ್ವಾರಂಟೈನ್ ವ್ಯವಸ್ಥೆಯನ್ನು ಸಂಬಂಧಿಸಿದ ಸಂಸ್ಥೆಯ ಪ್ರಮುಖರು ಮಾಡಬೇಕು ಎಂದು ಸರ್ಕಾರವು ತನ್ನ ಆದೇಶದಲ್ಲಿ ಹೇಳಿದೆ. ಇಷ್ಟೇ ಅಲ್ಲದೆಯೇ 5 ದಿನಗಳ ಕ್ವಾರಂಟೈನ್ ಮುಗಿದ ನಂತರ ಮತ್ತೆ ಆರ್‍ ಟಿ ಪಿ ಸಿ ಆರ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕೂಡ ಸರ್ಕಾರ ತಿಳಿಸಿದೆ.

ಆದರೆ ಕೇರಳ ರಾಜ್ಯವನ್ನು ಹೊರತುಪಡಿಸಿ ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವವರು ಕೋವಿಡ್ ಎರಡು ಲಸಿಕೆ ಪಡೆದಿರುವ ಪ್ರಮಾಣಪತ್ರ ಅಥವಾ ಕೋವಿಡ್ ಎಂಟಿಜನ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ : ವಾಜಪೇಯಿಯವರೂ ಎತ್ತಿನ ಗಾಡಿಯಲ್ಲಿ ಬಂದಿದ್ದರು, ನಾವು ಬಂದರೆ ತಪ್ಪೇಕೆ?: ಸಿದ್ದರಾಮಯ್ಯ

Advertisement
Advertisement

Udayavani is now on Telegram. Click here to join our channel and stay updated with the latest news.

Next