ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಗೂಡ್ಸ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಪ್ರಯಾಣಿಸುತ್ತಿದ್ದಾಗ ನ್ಯೂ ಜಲ್ಪೈಗುರಿಗೆ ಸಮೀಪವಿರುವ ರಂಗಪಾಣಿ ನಿಲ್ದಾಣದ ಬಳಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ, ಈ ವೇಳೆ ಮೂರೂ ಬೋಗಿಗಳು ಜಖಂಗೊಂಡಿದ್ದು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಜೊತೆಗೆ ಇಪ್ಪತ್ತೈದು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳು ಹಳಿತಪ್ಪಿವೆ ಎಂದು ತಿಳಿದುಬಂದಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಹಿಂದಿನ ಭಾಗವು (ಕಾರ್ಗೋ ವಿಭಾಗ) ಸರಕು ಹಾಕುವ ಭಾಗವಾಗಿದ್ದುದರಿಂದ ಹೆಚ್ಚಿನ ಅವಘಡ ತಪ್ಪಿದೆ.
ಸದ್ಯ ರೈಲ್ವೆ ಅಧಿಕಾರಿಗಳು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ, ಜೊತೆಗೆ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ, ಘಟನಾ ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂ ಹಾಗು ಪಶ್ಚಿಮ ಬಂಗಾಳ ರಾಜ್ಯದ ನಡುವೆ ಸಂಚರಿಸುವ ರೈಲು ಆಗಿದ್ದು ಇದೀಗ ಸಂಭವಿಸಿದ ಅವಘಡದಿಂದ ಈ ಭಾಗದಲ್ಲಿ ಸಂಚರಿಸುವ ಹೆಚ್ಚಿನ ಸಂಖ್ಯೆಯ ರೈಲುಗಳ ಮೇಲೆ ಪರಿಣಾಮ ಬೀಳಲಿದೆ ಎಂದು ಹೇಳಲಾಗಿದೆ.