ನವದೆಹಲಿ/ಲಕ್ನೋ: ಸುಪ್ರೀಂಕೋರ್ಟ್ ನಿರ್ದೇಶನ ಪ್ರಕಾರ ಎಸ್ ಸಿ/ಎಸ್ ಟಿ ಕಾಯ್ದೆಯ ತಿದ್ದುಪಡಿಗಳನ್ನು ಕೇಂದ್ರ ಸರಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳು ಸೋಮವಾರ ಕರೆ ಕೊಟ್ಟಿದ್ದ
(ಇದನ್ನೂ ಓದಿ: ಭಾರತ್ ಬಂದ್ : ಆಗ್ರಾದಲ್ಲಿ ಹಿಂಸೆ, ವಿವಿಧ ರಾಜ್ಯಗಳಲ್ಲಿ ರೈಲು ತಡೆ) ಭಾರತ್ ಬಂದ್ ಹಿಂಸಾಚಾರಕ್ಕೆ ತಿರುಗಿದ್ದು, ಮಧ್ಯಪ್ರದೇಶದಲ್ಲಿ ಐವರು ಹಾಗೂ ರಾಜಸ್ಥಾನದ ಅಲ್ವಾಟ್ ನಲ್ಲಿ ಪೊಲೀಸ್ ಫೈರಿಂಗ್ ನಲ್ಲಿ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.
ಪಂಜಾಬ್, ರಾಜಸ್ಥಾನ್, ಜಾರ್ಖಂಡ್ ಹಾಗೂ ಉತ್ತರಪ್ರದೇಶದಲ್ಲಿ ಬಂದ್ ತೀವ್ರ ಹಿಂಸಾರೂಪಕ್ಕೆ ತಿರುಗಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ. ಪಂಜಾಬ್ ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆಯನ್ನು ನಿಯೋಜಿಸಿದೆ. ಅಲ್ಲದೇ ಕೆಲವು ರಾಜ್ಯಗಳಲ್ಲಿ ರೈಲು ಸೇರಿದಂತೆ ಸಾರಿಗೆ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ.
ಮಧ್ಯಪ್ರದೇಶದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ವಿದ್ಯಾರ್ಥಿ ನಾಯಕ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆಯನ್ನು ನಿಯೋಜಿಸಲಾಗಿದೆ. ಗ್ವಾಲಿಯರ್ ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.
ರಾಜಸ್ಥಾನ್, ಜೈಪುರ್, ಬರ್ಮೆರ್, ಅಲ್ವಾರ್ ನಲ್ಲಿ ಘರ್ಷಣೆ ನಡೆದಿದ್ದು, ಹಲವೆಡೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರ, ಒಡಿಶಾ, ಪಂಜಾಬ್, ರಾಜಸ್ಥಾನ್ ನ ಹಲವೆಡೆ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ. ಚಂಡೀಗಢ್ ನಲ್ಲಿ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಎಸ್‌ಸಿ/ಎಸ್‌ಸಿ ಕಾಯಿದೆಯ ಪ್ರಸ್ತಾವಿತ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಅನೇಕ ದಲಿತ ಸಂಘಟನೆಗಳು ದೇಶಾದ್ಯಂತ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿತ್ತು.