Advertisement

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಐವರು ದುರ್ಮರಣ ನಾಲ್ವರು ಗಂಭೀರ

10:26 PM Aug 09, 2017 | Team Udayavani |

ಅಂಕೋಲಾ : ನಿಂತಿದ್ದ ಲಾರಿಗೆ ಸ್ವಿಫ್ಟ್ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲದ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಸಂಭವಿಸಿದೆ. 

Advertisement

ಅಪಘಾತದಲ್ಲಿ ಗಂಭೀರ ಗಾಯಗೊಂಡವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ, ಮೃತರನ್ನು ಬಿಜಾಪುರ ಜಿಲ್ಲೆಯ ಜುಮ್ಮನಾಳದವರೆಂದು ತಿಳಿದುಬಂದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next