Advertisement
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ”ಹಿಂದಿನ ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ. ಹಿಂದಿನ ಸರಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ LOC ಕೊಡುವುದಕ್ಕೆ ಈ ಸರಕಾರದಲ್ಲಿ 5% ಫಿಕ್ಸ್ ಮಾಡಿದ್ದಾರೆ. ಇಂಥವರು ಭಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಆ ಸಚಿವರು ಯಾರು?ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ವಿದೇಶಿ ಪ್ರವಾಸದಲ್ಲಿರುವ ಆ ಸಚಿವರು ಯಾರು? ಆ ಸಚಿವರ ಗಮನಕ್ಕೆ ಬಾರದೆಯೇ ಅವರ ಇಲಾಖೆಗೆ ಪೋಸ್ಟಿಂಗ್ ಅದ ಆ ಅಧಿಕಾರಿ ಯಾರು? ಎನ್ನುವುದನ್ನು ಬಹಿರಂಗ ಮಾಡಲಿ. ಮೊದಲು ಇವರು ನನ್ನ ಬಗ್ಗೆ ಬಗ್ಗೆ ಲಘುವಾಗಿ ಮಾತಾನಾಡುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದರು. ಸಿಎಂ ಅವರೇ ಆ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಅದಕ್ಕೆ ಸಂಬಂಧಪಟ್ಟ ಮಂತ್ರಿ ವಿದೇಶದಲ್ಲಿ ಇದ್ದಾರೆ. ಸಿಎಂ ಆದೇಶ ಮಾಡಿದ್ದರೂ, ನಾನು ಬರುವವರೆಗೂ ಅಧಿಕಾರ ತೆಗೆದುಕೊಳ್ಳಬೇಡಿ ಅಂತ ತಾಕೀತು ಮಾಡಿದ್ದಾರಂತೆ. ಹಾಗಾದರೆ ಎಷ್ಟು ಹಣ ಕೊಟ್ಟು ಬಂದರು ಈ ಅಧಿಕಾರಿ? ಈಗ ‘ವರ್ಗಾವಣೆ ಜ್ಯೋತಿ’ ಕಾರ್ಯಕ್ರಮ ನಡೆಯುತ್ತಿದೆ. ಈ ದಂಧೆ ಬಗ್ಗೆ ಏನು ಹೇಳ್ತಾರೆ ಇವರು. ಎಸಿಬಿ ದಾಳಿಗೆ ಒಳಗಾಗಿದ್ದ ಇನ್ನೊಬ್ಬ ಅಧಿಕಾರಿಯನ್ನು ಸಿಎಂ ಕಚೇರಿಯಲ್ಲಿಯೇ ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಹಾಜರಿದ್ದರು.