ಉತ್ತರ ಪ್ರದೇಶ: ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ತಿಂಗಳ ಹಸುಳೆ ಸೇರಿ ಐದು ಮಂದಿ ಮೃತಪಟ್ಟು ಹಲವರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಅಲಿಘರ್‌ನ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ(ನ.20) ತಡರಾತ್ರಿ ಸಂಭವಿಸಿದೆ.
ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್, ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಪರಿಣಾಮ ಬಸ್ ನ ಮುಂಭಾಗ ಛಿದ್ರಗೊಂಡಿದ್ದು ಪ್ರಯಾಣಿಕರು ಬಸ್ಸಿನ ಒಳಗೆ ಸಿಲುಕಿಕೊಂಡಿದ್ದಾರೆ.
ಅಪಘಾತದಲ್ಲಿ 11 ತಿಂಗಳ ಹೆಣ್ಣು ಮಗು, ಐದು ವರ್ಷದ ಮಗು, ಮೂವರು ಮಹಿಳೆಯರು ಮತ್ತು ಒಂಬತ್ತು ಪುರುಷರು ಸೇರಿದಂತೆ 15 ಮಂದಿ ಗಾಯಗೊಂಡಿದ್ದು ಸ್ಥಳೀಯರು ಬಸ್ಸಿನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ರಕ್ಷಿಸಿ ಜೇವರ್‌ನ ಕೈಲಾಶ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಿದ್ದಾರೆ. ಸದ್ಯ ಮೂರು ಶವಗಳನ್ನು ಗುರುತಿಸಲಾಗಿದ್ದು, ಇನ್ನೆರಡು ಶವಗಳ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ: Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ