Advertisement

Karnataka; ಸಮುದಾಯ ಆರೋಗ್ಯ ಕೇಂದ್ರಗಳ ಅಧಿಕಾರಿಗಳ ವೇತನ ಶೇ.5 ಹೆಚ್ಚಳ

01:32 AM Feb 18, 2024 | Team Udayavani |

ಬೆಂಗಳೂರು: ಸಮುದಾಯ ಆರೋಗ್ಯ ಕೇಂದ್ರಗಳ ಅಧಿಕಾರಿಗಳಿಗೆ ಶೇ.5ರಷ್ಟು ವೇತನ ಹೆಚ್ಚಳಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಾತ್ವಿಕ ಒಪ್ಪಿಗೆ ನೀಡಿದ್ದಾರೆ.

Advertisement

ಫೆ.13ರಂದು ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳು ಸಚಿವರನ್ನು ಭೇಟಿಯಾಗಿ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಗೆ ಶೇ.5ರಷ್ಟು ವೇತನ ಹೆಚ್ಚಳ ಮಾಡಿದ್ದು, ಈ ಸಮಯದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ನಮ್ಮ ವೇತನ ಕೂಡ ಶೇ.5ರಷ್ಟು ಹೆಚ್ಚಿಸಬೇಕೆಂದು ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದಾರೆ.

ಇದೇ ವೇಳೆ ಸಂಘದ ಪದಾಧಿಕಾರಿಗಳು ಪ್ರೋತ್ಸಾಹಧನವನ್ನು 8 ಸಾವಿರದಿಂದ 15 ಸಾವಿರ ರೂ.ಗೆ ಹೆಚ್ಚಿಸಬೇಕು ಹಾಗೂ ಹುದ್ದೆಯನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ಇತರ ರಾಜ್ಯಗಳಲ್ಲಿರುವ ಅನುಷ್ಠಾನದ ವರದಿಯನ್ನು ಪಡೆಯಲು ಕರ್ನಾಟಕ ರಾಜ್ಯದಿಂದ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಈ ತಂಡ ಮುಂದಿನ ವಾರ ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಭೇಟಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ತಂಡಗಳು ನೀಡುವ ವರದಿಯನ್ನಾಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next