Advertisement

ಪುಣೆ: ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಐವರು ಕಾರ್ಮಿಕರ ಸಾವು: ಪ್ರಧಾನಿ ಸಂತಾಪ

11:39 AM Feb 04, 2022 | Team Udayavani |

ನವದೆಹಲಿ: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದು ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ:ಹಿಜಾಬ್ ವಿದ್ಯಾರ್ಥಿನಿಯರ ಮೂಲಭೂತ ಹಕ್ಕು, ಎಲ್ಲೂ ಸಮವಸ್ತ್ರ ಕಡ್ಡಾಯ ಮಾಡಿಲ್ಲ: ಸಿದ್ದರಾಮಯ್ಯ

ಗುರುವಾರ (ಫೆ.03) ತಡರಾತ್ರಿ ಪುಣೆಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಐವರು ಸಾವನ್ನಪ್ಪಿದ್ದು, ಏಳು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಹತ್ತು ಮಂದಿ ಕಾರ್ಮಿಕರು ಇದ್ದಿದ್ದು, ದಿಢೀರನೆ ಕಟ್ಟಡ ಕುಸಿದು ಬಿದ್ದ ಪರಿಣಾಮ ಕಾರ್ಮಿಕರ ಮೈಮೇಲೆ ಕಬ್ಬಿಣದ ಸರಳು, ಸಿಮೆಂಟ್ ಅಡಿ ಸಿಲುಕಿದ್ದರು ಎಂದು ಅಗ್ನಿಶಾಮಕ ದಳದ ಅಧಿಕಾರಿ ಸುನಿಲ್ ಗಿಲ್ಬಿಲೆ ತಿಳಿಸಿದ್ದಾರೆ.

ಘಟನೆಯಲ್ಲಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಐದು ಮಂದಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕಟ್ಟಡ ನಿರ್ಮಾಣ ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿರಲಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next