Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 3ನೇ ಬಾರಿ ಬಂಡವಾಳ ಹೂಡಿಕೆ ಸಮಾವೇಶ ನಡೆಯುತ್ತಿದೆ. ಇದಕ್ಕಾಗಿ ವಿಶ್ವದ ವಿವಿಧ ರಾಷ್ಟ್ರಗಳಿಗೆ ತೆರಳಿ, ಕಂಪೆನಿಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ, ರಾಜ್ಯಕ್ಕೆ ಆಹ್ವಾನಿಸಲಾಗಿದೆ. ಹಲವು ಬಹುರಾಷ್ಟ್ರೀಯ ಕಂಪೆನಿಗಳು ಭಾಗವಹಿಸಲಿವೆ. ವಿಶ್ವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ಉದ್ಯಮ ಸ್ಥಾಪನೆಗೆ ಮುಂದೆ ಬರಲಿರುವ ಕಂಪೆನಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ರಾಜ್ಯಾದ್ಯಂತ 50 ಸಾವಿರ ಎಕ್ರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂದರು.
ಕಳೆದ ವಾರ ಜಿಲ್ಲೆಗೆ ಆಗಮಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪರೋಕ್ಷವಾಗಿ ಸಚಿವ ನಿರಾಣಿ ಅವರನ್ನು ಉಲ್ಲೇಖಿಸಿ ಜಿಲ್ಲೆಯಲ್ಲಿ ಒಂದು ಹುಳು ಇದೆ ಎಂದಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ನಿರಾಣಿ, ಅವರು ನಮ್ಮಣ್ಣ ಇದ್ದಂತೆ. ಹೀಗಾಗಿ ಬಯ್ಯುತ್ತಿರುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. 20 ವರ್ಷಗಳಿಂದ ನನ್ನನ್ನು ಬಯ್ಯುತ್ತಿದ್ದು, ನಾನು ಬೆಳೆಯುತ್ತಲೇ ಇದ್ದೇನೆ ಎಂದರು.