Advertisement
ಎರಡನೇ ಅಲೆಯನ್ನು ಎದುರಿಸಲು ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಡೀ ರಾಜ್ಯದಲ್ಲಿ ಎಲ್ಲಿಯೂ ರೆಮಿಡಿಸಿವರ್ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಜತೆಗೆ, ಅಗತ್ಯವಾದ ಎಲ್ಲ ಔಷಧಿಗಳು, ಸಾಮಗ್ರಿಗಳು ಮತ್ತು ವೈದ್ಯಕೀಯ ಬಳಕೆಯ ವಸ್ತುಗಳ ಕೊರತೆ ಆಗದಂತೆ ನೋಡಿಕೊಳ್ಳಲಾಗಿದೆ” ಎಂದರು.
Related Articles
Advertisement
ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪ್ರಾಮುಖ್ಯತೆ ನೀಡಲಾಗಿದೆ. ಪ್ರತಿ ಜಿಲ್ಲೆಯ ವೈದ್ಯಕೀಯ ಅಗತ್ಯ ವಸ್ತುಗಳ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಇನ್ನು ಮಾರ್ಚ್ ತಿಂಗಳಲ್ಲಿ ದಿನಕ್ಕೆ 100ರಿಂದ 150 ಮೆ.ಟನ್ ಆಗಿದ್ದ ಆಮ್ಲಜನಕದ ಬೇಡಿಕೆ ಇದ್ದಕ್ಕಿದ್ದಂತೆ ದಿನಕ್ಕೆ 1,200 ಟನ್‌ಗಳಿಗೆ ಏರಿದೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.
ಕೋವಿಡ್ ಕರ್ತವ್ಯಕ್ಕೆ ಹಾಜರಾಗುವ ವೈದ್ಯ ವಿದ್ಯಾರ್ಥಿಗಳು & ಇಂಟರ್ನಿಗಳಿಗೆ ಎಲ್ಲ ಸೌಲಭ್ಯ ಕಲ್ಪಸಲಾಗುತ್ತಿದೆ. ಅವರಿಗೆ ಸಂಬಳ ಮತ್ತು ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಜತೆಗೆ ಅವರ ಆರೋಗ್ಯ ಮತ್ತು ವಿಶ್ರಾಂತಿಯ ಮೇಲೂ ನಿಗಾ ಇಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.