Advertisement

ಬಿಎಂಟಿಸಿ ಮೃತ ನೌಕರನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ,ಸರ್ಕಾರಿ ಹುದ್ದೆ: ಶ್ರೀರಾಮುಲು

03:00 PM Mar 10, 2023 | Team Udayavani |

ರಾಯಚೂರು: ಬಸ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ಬಿಎಂಟಿಸಿ ನೌಕರನ ಕುಟಂಬಕ್ಕೆ ಐದು ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವಂತೆ ಆದೇಶ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನಿದ್ರೆ ಮಂಪರಿನಲ್ಲಿದ್ದಾಗ ಅನಾಹುತ ಸಂಭವಿಸಿದೆ. ಘಟನೆ ತಿಳಿಯುತ್ತಿದ್ದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಾರಿಗೆ ನೌಕರರಿಗೆ ವೇತನ ಹೆಚ್ಚಳದ ವಿಚಾರದಲ್ಲಿ ಶೀಘ್ರವೇ ಸಿಹಿ ಸುದ್ದಿ ಕೊಡಲಾಗುವುದು. ನಾವು ಶೇ.10ರಷ್ಟು ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದು, ಸರ್ಕಾರಿ ನೌಕರರ ಮಾದರಿಯಲ್ಲಿ ಶೇ.17ರಷ್ಟು ವೇತನ ಹೆಚ್ಚಿಸುವಂತೆ ಸಾರಿಗೆ ಸಿಬ್ಬಂದಿ ಒತ್ತಾಯಿಸುತ್ತಿದ್ದಾರೆ. ಆದರೆ, ಇದರಿಂದ ಸರ್ಕಾರಕ್ಕೆ 6500 ಕೋಟಿ ಹೊರೆಯಾಗಲಿದೆ. ಅನೇಕ ವರ್ಷಗಳಿಂದ ಸಾರಿಗೆ ಪ್ರಯಾಣ ದರ ಕೂಡ ಹೆಚ್ಚಿಸಿಲ್ಲ. ಈ ಎಲ್ಲ ವಿಚಾರಗಳ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚೆ ಮಾಡಿದ್ದು, ಶೀಘ್ರದಲ್ಲೇ ಸಿಎಂ ಜತೆ ಕೂಡ ಚರ್ಚಿಸಲಾಗುವುದು. ಆದಷ್ಟು ಬೇಗ ಸಾರಿಗೆ ಸಿಬಂದಿ ಮನವೊಲಿಸಿ ವೇತನ ಹೆಚ್ಚಳ ಮಾಡಲಾಗುವುದು ಎಂದರು.

ಪ್ರಧಾನಿ ಮೋದಿ ನಮ್ಮ ನಾಯಕರು. ಅವರ ನೇತೃತ್ವದಲ್ಲಿಯೇ ಹಿಂದಿನ ಚುನಾವಣೆ ಎದುರಿಸಿದ್ದು, ಈ ಬಾರಿಯೂ ಮೋದಿ ಹೆಸರಲ್ಲೆ ಚುನಾವಣೆ ಎದುರಿಸುತ್ತೇವೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next