ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Advertisement
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಹಯೋಗದೊಂದಿಗೆ, ಬೆಳಗಾವಿಯ ಸರ್ದಾರ್ ಹೆ„ಸ್ಕೂಲ್ ಮೈದಾನದಲ್ಲಿ ಏರ್ಪಡಿಸಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಿಸಿ ಅವರು ಮಾತನಾಡಿದರು.
Related Articles
Advertisement
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಮಾತನಾಡಿ, ಮುಖ್ಯಮಂತ್ರಿಗಳು ಮಹಿಳಾ ಸ್ವಸಹಾಯ ಸಂಘಗಳಿಗೆ ಶಕ್ತಿ ಹಾಗೂ ನಾಯಕತ್ವ ನೀಡಿ ಮಹಿಳೆಯರ ಸಬಲೀಕರಣಕ್ಕೆ ಹಗಲಿರುಳು ದುಡಿಯತ್ತಿದ್ದಾರೆ. ಮಾರುಕಟ್ಟೆ ಬಲವರ್ಧನೆಗೆ , ಕೌಶಲ್ಯ ಅಭಿವೃದ್ಧಿ ಇ ಕಾಮರ್ಸ್ ಸಂಸ್ಥೆಗಳೊಂದಿಗೆ ಒಡಂಬಡಿಕೆಯ ಮಾಡಿಕೊಳ್ಳಲಾಗಿದೆ. ಆವಿಷ್ಕಾರ, ಪ್ರಗತಿಪರ ತಂತ್ರಜ್ಞಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದುಇದರ ಲಾಭ ಮಹಿಳೆಯರಿಗೂ ಲಭಿಸಿ ನಮ್ಮ ನಾಡಿನ ಮಹಿಳೆಯರು ವಿಶ್ವ ಮಟ್ಟದ ಪ್ರಗತಿ ಹೊಂದಬೇಕು ಎಂದು ಹೇಳಿದರು. ಶಾಸಕ ಅನಿಲ್ ಎಸ್. ಬೆನಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬೆಳಗಾವಿ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಗಡಿಯನ್ನು ಹಂಚಿಕೊಂಡಿದ್ದು, ಬೆಳಗಾವಿಯಲ್ಲಿ ಶಾಶ್ವತ ಪ್ರದರ್ಶನ ಹಾಗೂ ಮಾರುಕಟ್ಟೆ ಸ್ಥಾಪಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯಮ ಯೋಜನೆಯಡಿ ಕೊಪ್ಪಳ ಹಾಗೂ ಮೈಸೂರಿನ ತಾಲೂಕುಗಳ ಮಹಿಳಾ ಸ್ವ ಸಹಾಯ ಸಂಘಗಳಿಗೆ 50 ಲಕ್ಷ ರೂಪಾಯಿ ಚಕ್ ವಿತರಣೆ ಮಾಡಲಾಯಿತಲ್ಲದೆ ತಾಂತ್ರಿಕ ಬೆಂಬಲ ಸಂಸ್ಥೆಗಳಿಗೆ ಒಡಂಬಡಿಕೆಯ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಐ.ಎನ್.ಸ್ ಪ್ರಸಾದ್, ಜಿ.ಪಂ ಸಿಇಒ ದರ್ಶನ.ಎಚ್.ವಿ. ಉಪಸ್ಥಿತರಿದ್ದರು. ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ. ರಾಗಪಿಯಾ.ಆರ್ ಸ್ವಾಗತಿಸಿದರು.