Advertisement

ಪ್ರವಾಹದಲ್ಲಿ ಮೃತಪಟ್ಟ ಇಬ್ಬರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ

11:27 PM Sep 16, 2020 | mahesh |

ಧಾರವಾಡ: ಅಣ್ಣಿಗೇರಿ ತಾಲ್ಲೂಕಿನ ಬಲ್ಲರವಾಡ ಗ್ರಾಮದಲ್ಲಿ ಬೆಣ್ಣೆಹಳ್ಳದ ಪ್ರವಾಹದಿಂದಾಗಿ ಕೊಚ್ಚಿ ಹೋದ ಶ್ರೀಕಾಂತರಡ್ಡಿ ಇನಾಮತಿ ಹಾಗೂ ದೇವೆಂದ್ರಪ್ಪ ಯಮನಪ್ಪ ಮಾದರ ಅವರ ಕುಟುಂಬಗಳಿಗೆ ಇಂದು ತಲಾ 5 ಲಕ್ಷ ರೂ.ಪರಿಹಾರ ನೀಡಲಾಯಿತು.

Advertisement

ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರು ಮೃತರ ವಾರಸುದಾರರಾದ ಅನಸೂಯಾ ಶ್ರೀಕಾಂತರಡ್ಡಿ ಇನಾಮತಿ ಹಾಗೂ ಸಾವಕ್ಕ ಮಾದರ ಇವರಿಗೆ ತಲಾ 5 ಲಕ್ಷ ರೂ ಗಳ ಪರಿಹಾರ ಧನದ ಚೆಕ್ ನೀಡಿ, ಬೆಣ್ಣೆಹಳ್ಳ ವೀಕ್ಷಿಸಿದರು.

ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರ ಪ್ರಕಾಶ ನಾಶಿ,ಅಣ್ಣಿಗೇರಿ ತಹಶಿಲ್ದಾರ ಕೊಟ್ರೇಶ, ನವಲಗುಂದ ತಹಶಿಲ್ದಾರ ನವೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next