Advertisement

ಜಮ್ಮು &ಕಾಶ್ಮೀರದಲ್ಲಿ ಭದ್ರತಾಪಡೆಯ ಕಾರ್ಯಾಚರಣೆ : ಐವರು ಉಗ್ರರ ಹತ್ಯೆ

08:01 AM Oct 13, 2021 | Team Udayavani |

ನವದೆಹಲಿ:  ನಿನ್ನೆ (ಮಂಗಳವಾರ) ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಲಷ್ಕರ್-ಎ-ತೊಯ್ಬಾ ಮತ್ತು ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

Advertisement

ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಭದ್ರತಾ ಪಡೆಯಿಂದ ಎನ್‌ಕೌಂಟರ್ ನಡೆದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು-ಸೇನೆಯ ಜಂಟಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಎನ್ ಕೌಂಟರ್ ನಡೆದಿದೆ.

ಇನ್ನೊಂದು ಕಡೆ ದೆಹಲಿ ವಿಶೇಷ ಪೊಲೀಸ್ ದಳ ಪಾಕಿಸ್ತಾನಿ ಉಗ್ರನನ್ನ ಬಂಧಿಸಿದ್ದಾರೆ. ಬಂಧಿತನಿಂದ ಒಂದು ಎಕೆ-47 ಗನ್ ಸೇರಿದಂತೆ ಹಲವು ಸ್ಫೋಟಕ ವಸ್ತುಗಳನ್ನ ವಶಕ್ಕೆ ಪಡದುಕೊಳ್ಳಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next