ಮಹಾರಾಷ್ಟ್ರ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಎನ್‌ಎಚ್ 6 ರಲ್ಲಿ ಶನಿವಾರ ಬೆಳಿಗ್ಗೆ ಎರಡು ಬಸ್‌ಗಳು ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ವರದಿಯಾಗಿದೆ.
ಜಿಲ್ಲೆಯ ಮಲ್ಕಾಪುರ ಪಟ್ಟಣದ ಮೇಲ್ಸೇತುವೆಯಲ್ಲಿ ಮುಂಜಾನೆ ಶನಿವಾರ ಮುಂಜಾನೆ 2.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
“ಅಮರನಾಥ ಯಾತ್ರೆಗೆ ಮುಗಿಸಿ ವಾಪಸು ಬರುತ್ತಿದ್ದ ಒಂದು ಬಸ್, ನಾಸಿಕ್ ಕಡೆಗೆ ಹೋಗುತ್ತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಎದುರಿಗೆ ಹೋಗುತ್ತಿದ್ದ ಬಸ್ಸನ್ನು ಹಿಂದಿಕ್ಕುವ ವೇಳೆ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ, ಘಟನೆಯಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಗಾಯಗೊಂಡ ಇಪ್ಪತ್ತು ಮಂದಿಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಬುಲ್ಧಾನಾದ ಆಸ್ಪತ್ರ್ರೆಯ ವೈದ್ಯರು ತಿಳಿಸಿದ್ದಾರೆ. ಘಟನೆ ನಡೆದ ಕೂಡಲೇ ಪೊಲೀಸರು ಹಾಗೂ ಸ್ಥಳೀಯರು ಬಸ್ಸಿನಲ್ಲಿದ್ದವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಅವಘಡ ಸಂಭವಿಸಿದ ಪರಿಣಾಮ ಕೆಲ ಗಂಟೆಗಳ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು ಬಳಿಕ ಪೊಲೀಸರು ಅಪಘಾತಗೊಂಡ ಬಸ್ಸುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ: 5.9 ತೀವ್ರತೆ ದಾಖಲು