ಚೆನ್ನೈ: ಪೆಟ್ರೋಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐದು ಮಂದಿ ಮೃತಪಟ್ಟ ಘಟನೆ ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಗುರುವಾರ ತಡ ರಾತ್ರಿ ಸಂಭವಿಸಿದೆ.
ಪೆಟ್ರೋಲ್ ಟ್ಯಾಂಕರ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮಣಕಾಡೌ ಬಳಿ ಸಾಗುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ನೇರವಾಗಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78) ಮತ್ತು ಕಲಾರಾಣಿ (50) ಮೃತ ದುರ್ದೈವಿಗಳು.
ಕಾರಿನಲ್ಲಿದ್ದವರು ಮದುವೆ ಕಾರ್ಯಕ್ರಮ ಮುಗಿಸಿ ಊರಿಗೆ ವಾಪಸ್ಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು ಕಾರಿನೊಳಗೆ ಸಿಲುಕಿಕೊಂಡವರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು ಎಂದು ಸ್ಥಳೀಯರು ಹಾಗೂ ಪೊಲೀಸರು ಹೇಳಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಘೋಷಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಿದರು.
ಇದನ್ನೂ ಓದಿ: Mangaluru: ಕೆಎಂಸಿ ಆಸ್ಪತ್ರೆಯ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ. ಲಕ್ಷ್ಮಣ ಪ್ರಭು ನಿಧನ