Advertisement

ನದಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 5 ಮಂದಿ ನೀರುಪಾಲು

10:10 AM Nov 15, 2022 | Team Udayavani |

ಅಹಮದಾಬಾದ್ : ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಸೋಮವಾರ ನರ್ಮದಾ ಕಾಲುವೆಯಲ್ಲಿ ಮುಳುಗಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಮೃತರು ಒಂದೇ ಕುಟುಂಬದವರು ಎನ್ನಲಾಗಿದೆ. ಪ್ರಾಗ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಡ್ಲಾ ಗ್ರಾಮದ ಬಳಿ ಸೋಮವಾರ ಸಂಜೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ಕಚ್ ಪಶ್ಚಿಮ ಎಸ್‌ಪಿ ಸೌರಭ್ ಸಿಂಗ್ ತಿಳಿಸಿದ್ದಾರೆ.

ಎಲ್ಲಾ ಐದು ಮಂದಿ ಕಾಲುವೆಯ ದಡದಲ್ಲಿದ್ದಾರೆ ಎಂದು ಹೇಳಲಾಗಿದ್ದು, ಈ ವೇಳೆ ಮಹಿಳೆಯೊಬ್ಬರು ಕಾಲುವೆಯ ನೀರು ತೆಗೆಯಲು ಇಳಿದಿದ್ದಾರೆ ಈ ವೇಳೆ ಮಹಿಳೆ ಕಾಲು ಜಾರಿ ಕಾಲುವೆಗೆ ಬಿದ್ದಿದ್ದಾಳೆ. ನೀರಿನಲ್ಲಿ ಮುಳುಗುತ್ತಿರುವುದನ್ನು ನೋಡಿದ ಇತರ ನಾಲ್ವರು ಆಕೆಯನ್ನು ರಕ್ಷಿಸಲು ನೀರಿಗೆ ಜಿಗಿದಿದ್ದಾರೆ, ದುರದೃಷ್ಟವಶಾತ್ ಯಾರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನೆ ನಡೆದ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮತ್ತು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಕತ್ತಲೆಯಾಗಿದ್ದ ಕಾರಣ ಕಾರ್ಯಾಚರಣೆಗೆ ಸಾಕಷ್ಟು ತೊಂದರೆಯಾಗಿತ್ತು. ಆದರೆ, ಹಲವು ಗಂಟೆಗಳ ಪ್ರಯತ್ನದ ಬಳಿಕ ಎಲ್ಲರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಇಬ್ಬರು ವಿವಾಹಿತ ದಂಪತಿಗಳು ಸೇರಿದ್ದಾರೆ ಎನ್ನಲಾಗಿದೆ.

ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

Advertisement

ಇದನ್ನೂ ಓದಿ : ನಿಯಂತ್ರಣ ತಪ್ಪಿ ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್; ತಪ್ಪಿದ ಭಾರೀ ಅನಾಹುತ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next