Advertisement

Gujarat; ಎರಡು ಬಸ್ಸುಗಳ ನಡುವೆ ಡಿಕ್ಕಿ; ಐವರು ಸಾವು; ಏಳು ಮಂದಿಗೆ ಗಾಯ

02:28 PM May 10, 2023 | Team Udayavani |

ಗುಜರಾತ್‌: ಎರಡು ಬಸ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿದ್ದು, ಕನಿಷ್ಠ ಏಳು ಮಂದಿ ಗಾಯಗೊಂಡ ಘಟನೆ ಗುಜರಾತ್​ನ ಗಾಂಧಿನಗರದಲ್ಲಿ ಬುಧವಾರ ನಡೆದಿದೆ.

Advertisement

ಕಲೋಲ್ ಪಟ್ಟಣದಲ್ಲಿ ಬೆಳಗ್ಗೆ 7.30ರ ಸುಮಾರಿಗೆ ಕೆಲವು ಪ್ರಯಾಣಿಕರು ಬಸ್‌ಗಾಗಿ ಕಾಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ರಾಜ್ಯ ಸಾರಿಗೆ (ಎಸ್‌ಟಿ) ಗೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎಂದು ಕಲೋಲ್ ಪೊಲೀಸರು ತಿಳಿಸಿದ್ದಾರೆ.

ಐವರು ಸಾವನ್ನಪ್ಪಿದ್ದು, ಕನಿಷ್ಠ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

ಕಲೋಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next