ಮಹಾರಾಷ್ಟ್ರ: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಾನಿಲ ಸೇವಿಸಿದ ಪರಿಣಾಮ 5 ಮಂದಿ ಕಾರ್ಮಿಕರಯ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ.
ಗುರವಾರ ಮಧ್ಯಾಹ್ನ ಸೋನಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೌಚಾ ತಾಂಡಾ ಪ್ರದೇಶದಲ್ಲಿರವ ತೋಟದಲ್ಲಿರುವ ಸೆಪ್ಟಿಕ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಲು 5 ಕಾರ್ಮಿಕರು ಇಳಿದಿದ್ದಾರೆ. ಈ ವೇಳೆ ವಿಷಾನಿಲದಿಂದ ಕಾರ್ಮಿಕರಿಗೆ ಉಸಿರಾಟ ತೊಂದರೆ ಉಂಟಾಗಿದೆ. ತೀವ್ರ ಅಸ್ವಸ್ಥಗೊಂಡ ಕಾರ್ಮಿಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಇದರಲ್ಲಿ ಐವರು ಕಾರ್ಮಿಕರು ಮೃತಪಟ್ಟಿದ್ದು, ಇನ್ನೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.
ಸೋನ್‌ಪೇಟ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಜುಲೈ 2022 ರಲ್ಲಿ, ಸರ್ಕಾರವು 2019 ರಿಂದೀಚೆಗೆ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳ ಶುಚಿಗೊಳಿಸುವ ಕಾರ್ಯದಲ್ಲಿ 188 ಜನರು ಸಾವನ್ನಪ್ಪಿದ್ದಾರೆ ಎಂದು ಲೋಕಸಭೆಗೆ ತಿಳಿಸಿತು.