Advertisement
ಮರೀನಾ ಬೀಚ್‌ಗೆ ಸಮೀಪವಿರುವ ಸರಕಾರಿ ಆಸ್ಪತ್ರೆಗಳಿಗೆ ದಾಖಲಾಗಿರುವ ಸುಮಾರು 100 ಜನರಲ್ಲಿ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು 93 ಜನರು ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಐದು ಜನರು ಆಸ್ಪತ್ರೆಗೆ ಕರೆತರುವಾಗಲೇ ಪ್ರಾಣ ಕಳೆದುಕೊಂಡಿದ್ದರು ಎಂದು ಸುಬ್ರಮಣಿಯನ್ ಹೇಳಿದ್ದಾರೆ. ಮೃತರಿಗೆ 5 ಲಕ್ಷ ರೂ ಪರಿಹಾರ ಘೋಷಿಸಿರುವ ಸಿಎಂ ಸ್ಟಾಲಿನ್, ಮುಂದಿನ ಬಾರಿ ಉತ್ತಮ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
Related Articles
Advertisement
ಅಸಮರ್ಪಕ ವ್ಯವಸ್ಥೆಗಳು ಎಂಬ ವಿರೋಧ ಪಕ್ಷಗಳ ಆರೋಪವನ್ನು ನಿರಾಕರಿಸಿದ ಸಚಿವ “ಐಎಎಫ್ 100 ಹಾಸಿಗೆಗಳನ್ನು ಸಿದ್ಧಪಡಿಸಲು ವಿನಂತಿಸಿದೆ, 20 ಹಾಸಿಗೆಗಳೊಂದಿಗೆ ಐಸಿಯು ಸೌಲಭ್ಯವನ್ನು ಹೊಂದಿದ್ದು, ಯಾವುದೇ ತುರ್ತು ಪರಿಸ್ಥಿತಿಗೆ ಪ್ರತಿಕ್ರಿಯಿಸಲು ರಕ್ತನಿಧಿಯನ್ನು ಸಿದ್ಧಮಾಡಿಕೊಂಡಿದ್ದೇವೆ. ನಾವು ಸುತ್ತಮುತ್ತಲಿನ ಐದು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 4,000 ಹಾಸಿಗೆಗಳನ್ನು ವ್ಯವಸ್ಥೆಗೊಳಿಸಿದ್ದೇವೆ ”ಎಂದರು.
”1,000 ವೈದ್ಯರು, ಅರೆವೈದ್ಯಕೀಯ ಸಿಬಂದಿ ಮತ್ತು 40 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸುವುದರ ಜತೆಗೆ, ಇತರ ಸರಕಾರಿ ಇಲಾಖೆಗಳ ಸಹಯೋಗದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದರು.
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸೇರಿ ವಿಪಕ್ಷ ನಾಯಕರು ಡಿಎಂಕೆ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.