Advertisement

ಪೊಲೀಸರಿಗೆ 5 ಪ್ರತ್ಯೇಕ ಕೋವಿಡ್‌ ಆಸ್ಪತ್ರೆ ಮೀಸಲು

07:48 AM Jun 24, 2020 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಸಿಬ್ಬಂದಿಗೆ ಬೆಂಗಳೂರಿನಲ್ಲಿ ಐದು ಕೋವಿಡ್‌ 19 ಆಸ್ಪತ್ರೆಗಳನ್ನು ಮೀಸಲಿಡಲು ಸರ್ಕಾರ ನಿರ್ಧರಿಸಿದೆ.

Advertisement

ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳವಾರ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಗೃಹ ಇಲಾಖೆಯ ಹೆಚ್ಚುವರಿ  ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ. ಪೊಲೀಸ್‌ ಸಿಬ್ಬಂದಿಗೆ ಕೋವಿಡ್‌ 19 ಸೋಂಕು ಹೆಚ್ಚಾಗುತ್ತಿವೆ.

ಪೊಲೀಸ್‌ ಸಿಬ್ಬಂದಿ ಹಾಗೂ ಅವರ ಕುಟುಂಬ ಆತಂಕಗೊಂಡಿದ್ದು, ಅವರಿಗೆ ಆತ್ಮಸ್ಥೈರ್ಯ ತುಂಬಲು ಪೊಲೀಸರಿಗಾಗಿಯೇ  ಪ್ರತ್ಯೇಕ ಕೋವಿಡ್‌ 19 ಪರೀಕ್ಷಾಲಯ, ಗಂಟಲು ದ್ರವ ಸಂಗ್ರಹಿಸುವ ಸಂಚಾರ ವಾಹನ ಕಾಯ್ದಿರಿಸುವಂತೆ ನಿರ್ದೇಶನ ನೀಡಿದ್ದಾರೆ. ಆಸ್ಪತ್ರೆಗಳಲ್ಲಿ ದಾಖಲಾಗಿರುವ ಪೊಲೀಸ್‌ ಸಿಬ್ಬಂದಿಗೆ ಉತ್ತಮ ಊಟ, ಮೂಲ ಸೌಕರ್ಯ ಒದಗಿಸುವುದು.  ಪೊಲೀಸ್‌ ಸಿಬ್ಬಂದಿಗಾಗಿ ಪ್ರತ್ಯೇಕ ಕ್ವಾರಂಟೈನ್‌ ಕೇಂದ್ರ, ಪೊಲೀಸರಿಗಾಗಿಯೇ ಪ್ರತ್ಯೇಕ ಆ್ಯಂಬುಲೆನ್ಸ್‌ ಕಲ್ಪಿಸುವಂತೆ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next