ಹೈದರಾಬಾದ್: ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ತೆಲಂಗಾಣದಲ್ಲಿ ಬೀದಿ ನಾಯಿಗಳ ದಾಳಿಗೆ ಮತ್ತೋರ್ವ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ರಘುನಾಥಪಾಲೆಂ ಮಂಡಲದ ಪುಟಾಣಿ ತಾಂಡಾದ ಬಾನೋತ್ ಭಾರತ್ (5) ಮೃತ ಬಾಲಕ. ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ತಿಂಗಳೊಳಗೆ ನಡೆದ ಎರಡನೆ ಘಟನೆಯಾಗಿದೆ.
ತನ್ನ ಮನೆಯ ಪಕ್ಕದ ರಸ್ತೆಯಲ್ಲಿ ಬಾನೋತ್ ಭಾರತ್ ಆಡುತ್ತಿದ್ದರು. ಈ ವೇಳೆ ಬೀದಿ ನಾಯಿಗಳು ಏಕಾಏಕಿ ಬಂದು ಬಾಲಕನ ಮೇಲೆ ದಾಳಿ ನಡೆಸಿದೆ. ನಾಯಿಯ ಕಡಿತದಿಂದ ತೀವ್ರವಾಗಿ ಗಾಯಗೊಂಡ ಭಾರತ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಬಾನೋತ್ ಮೃತಪಟ್ಟಿದ್ದಾನೆ.
ಕಳೆದ ತಿಂಗಳು 4 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಪರಿಣಾಮ ಬಾಲಕ ಮೃತಪಟ್ಟಿದ್ದ, ಆದಾದ ಬಳಿಕ ಪಕ್ಕದ ಪ್ರದೇಶದಲ್ಲಿ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ತೀವ್ರತರದ ಗಾಯಗೊಳಿಸಿತ್ತು.
Related Articles
ಈಗಾಗಲೇ ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ, ಬೀದಿ ನಾಯಿಗಳ ನಿಯಂತ್ರಣದ ಬಗ್ಗೆ ಹಲವು ಕ್ರಮಕೈಗೊಳ್ಳಲು ಸೂಚಿಸಲಾಗಿದೆ.