Advertisement

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

11:04 AM Nov 08, 2024 | Team Udayavani |

ಮಂಗಳೂರು: ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್‌ 80 ಮತ್ತು 81ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣ ಘಟಕ ಎಚ್ಚರಿಕೆ ನೀಡಿದೆ.

Advertisement

ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ 3ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಮಕ್ಕಳ ರಕ್ಷಣ ಘಟಕ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನವೆಂಬರ್‌ ತಿಂಗಳಲ್ಲಿ ಕಾನೂನುಬದ್ಧ ದತ್ತು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಲ್ಲಿ ದತ್ತು ಮಾಸಾಚರಣೆ ಆಚರಿಸಲಾಗುತ್ತಿದೆ.

ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿ ಕಂಡು ಬಂದಲ್ಲಿ ಮಕ್ಕಳ ರಕ್ಷಣ ಘಟಕ ಕಚೇರಿಯ ದೂರವಾಣಿ ಸಂಖ್ಯೆ 0824-2440004 ಅಥವಾ ಮಕ್ಕಳ ಸಹಾಯವಾಣಿ 1098 ಅಥವಾ 112ಕ್ಕೆ ಮಾಹಿತಿ ನೀಡಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Advertisement
Advertisement

Udayavani is now on Telegram. Click here to join our channel and stay updated with the latest news.

Next