Advertisement
ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘಟನೆ (ಫನಾ) ಸಂಘಟನೆ ಜೊತೆ ವೀಡಿಯೋ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕೋವಿಡ್ ಅಲ್ಲದ ರೋಗಿಗಳಿಗೆ ದಾಖಲಾತಿ ಅವಶ್ಯಕತೆ ಇಲ್ಲದಿದ್ದಲ್ಲಿ ಅಂತಹ ರೋಗಿಗಳಿಗೆ ಮನವಿ ಮಾಡಿ, ಬಿಡುಗಡೆ ಮಾಡಬೇಕು. ಅವನ್ನು ಕೋವಿಡ್ ಗೆ ಮೀಸಲಿಡಬೇಕು ಎಂದು ಹೇಳಲಾಗಿದೆ. ಒಂದು ವಾರದೊಳಗೆ 50% ರಷ್ಟು ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆಗಳವರು ಒಪ್ಪಿಕೊಂಡಿದ್ದಾರೆ. ಅಲ್ಪ ರೋಗಲಕ್ಷಣ ಹಾಗೂ ಲಕ್ಷಣರಹಿತ ರೋಗಿಗಳಿಗೆ ಹೋಟೆಲ್ ಗಳಲ್ಲಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಆಸ್ಪತ್ರೆಗಳ ಹಾಸಿಗೆಗಳಲ್ಲಿ ಅನಿವಾರ್ಯ ಇರುವವರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.
Related Articles
Advertisement
ಇದನ್ನೂ ಓದಿ: ಮಂಗಳೂರು ಆಳಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ: ಮೂವರು ಸಾವು, 6 ಮಂದಿ ನಾಪತ್ತೆ
ಕೋವಿಡ್ ಪರೀಕ್ಷೆಯಲ್ಲಿ ತಪ್ಪೆಸಗಿದ ನೌಕರರನ್ನು ವಜಾಗೊಳಿಸಲಾಗಿದೆ. ಇದೊಂದು ತಪ್ಪಿಗಾಗಿ ಸರ್ಕಾರ ಮಾಡಿದ ಉತ್ತಮ ಕೆಲಸಗಳನ್ನು ಮರೆ ಮಾಚುವುದು ಬೇಡ. ಈವರೆಗೆ 2.2 ಕೋಟಿಗೂ ಅಧಿಕ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 85% ನಷ್ಟು ಆರ್ ಟಿಪಿಸಿಆರ್ ಪರೀಕ್ಷೆಯಾಗಿದೆ ಎಂದರು.
ಕೋವಿಡ್ ತಡೆಗೆ ಜನರ ಸಹಕಾರ ಅಗತ್ಯ. ಲಾಕ್ ಡೌನ್ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಆದರೆ ಅಂತಹ ಅನಿವಾರ್ಯ ತರಬೇಡಿ ಎಂದು ಮನವಿ ಮಾಡುತ್ತಿದ್ದೇವೆ. ಲಾಕ್ ಡೌನ್ ನಿಂದ ಎಷ್ಟು ನಷ್ಟವಾಗುತ್ತದೆ ಎಂಬ ಅರಿವಿದೆ ಎಂದರು.
ಬೇವು ಕೋವಿಡ್, ಬೆಲ್ಲ ಲಸಿಕೆ: ಯುಗಾದಿ ಬೆಲ್ಲವೇ ಲಸಿಕೆ. ಬೇವು ಕೋವಿಡ್ ಸೋಂಕು. ಎಲ್ಲರೂ ಬೆಲ್ಲದಂತಿರುವ ಲಸಿಕೆಯನ್ನು ಪಡೆದು ಕೊರೊನಾ ನಿಯಂತ್ರಿಸಿ ಎಂದು ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.