Advertisement

ಜಿಮ್ ಗಳಿಗೆ ಶೇ 50ರಷ್ಟು ಅವಕಾಶ ನೀಡಿದ ಸರ್ಕಾರ

07:11 PM Apr 04, 2021 | Team Udayavani |

ಬೆಂಗಳೂರು : ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಜಿಮ್ ಗಳನ್ನು ಮುಚ್ಚಬೇಕೆಂದು ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಈ ಆದೇಶವನ್ನು ಹಿಂಪಡೆಯುವಂತೆ ಜಿಮ್ ಅಸೋಸಿಯೇಷನ್ ಸರ್ಕಾರಕ್ಕೆ ಮನವಿ ಸಲ್ಲಸಿದ್ದು, ಇದೀಗ ಮನವಿಗೆ ಸರ್ಕಾರ ಸ್ಪಂದಿಸಿದ್ದು 50% ಅವಕಾಶ ನೀಡಿದೆ.

Advertisement

ರಾಜ್ಯದ ಜಿಮ್ ಗಳಿಗೆ ಶೇ 50 ರಷ್ಟು ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ ಕೋವಿಡ್ ನಿಯಮವನ್ನು ಉಲ್ಲಂಘನೆ ಮಾಡಿದ್ರೆ ಜಿಮ್ ಗೆ ಬೀಗ ಹಾಕುವುದಾಗಿ ಎಚ್ಚರಿಗೆ ನೀಡಿದೆ.

ಜಿಮ್ ನಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ನಿಯಮವನ್ನು ಪಾಲಿಸಬೇಕು. ಇನ್ನು ಜಿಮ್ ಮಾಲೀಕರು ವ್ಯಾಯಾಮ ಉಪಕರಣಗಳನ್ನು ಸ್ಯಾನಿಟೈಸ್ ಮಾಡಬೇಕು. ಈ ಎಲ್ಲಾ ನಿಯಮಗಳನ್ನು ಪಾಲಿಸದೆ ನಿಯಮ ಉಲ್ಲಂಘನೆ ಮಾಡಿದ್ರೆ ಜಿಮ್ ಗೆ ಬೀಗ ಹಾಕಲಾಗುವುದು ಎಂದು ಆದೇಶ ಪತ್ರ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next