Advertisement

Bidar; ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ಬಿಡುಗಡೆ: ಸಚಿವ ಈಶ್ವರ ಖಂಡ್ರೆ

07:44 PM Mar 06, 2024 | Team Udayavani |

ಬೀದರ್: ಬಸವ ಕಲ್ಯಾಣದ ಆಧುನಿಕ ಅನುಭವ ಮಂಟಪ ಕಾಮಗಾರಿಗಳ ಬಿಲ್ ಪಾವತಿ ಮಾಡಲು 50 ಕೋಟಿ ರೂ. ಹಣವನ್ನು ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದು, ಇದು ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

Advertisement

ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಪ್ರತಿಪಕ್ಷದ ಕೆಲವರು ವೃಥಾ ಆರೋಪ ಮಾಡುತ್ತಿರುವುದರಲ್ಲಿ ಹುರುಳಿಲ್ಲ, ಸರ್ಕಾರ ಬಸವ ಕಲ್ಯಾಣದ ಅಭಿವೃದ್ಧಿಗೆ ಮತ್ತು ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಮಾರ್ಚ್ ತಿಂಗಳವರೆಗಿನ ಬಿಲ್ ಗಳನ್ನು ಪಾವತಿ ಮಾಡಲು ಕೂಡಲೇ 50 ಕೋಟಿ ರೂ. ನೀಡಬೇಕು ಎಂದು ತಾವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕೂಡಲೇ ಅವರು ಹಣ ಮಂಜೂರು ಮಾಡಿದರು. ಆ ಹಣ ಜಿಲ್ಲಾಧಿಕಾರಿಗಳ ಖಾತೆಗೂ ಜಮಾ ಆಗಿದೆ ಆದರೂ ಕೆಲವರು ಸುಳ್ಳು ಪ್ರಚಾರ ಮಾಡಿ ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ ಇದು ಅಕ್ಷಮ್ಯ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಬಸವಕಲ್ಯಾಣದ ಆಧುನಿಕ ಅನುಭವ ಮಂಪಟಕ್ಕೆ ಹೆಚ್ಚಿನ ಅನುದಾನ ತಂದು, ಕಾಮಗಾರಿಗೆ ವೇಗ ನೀಡಿ, ಬಸವ ಭಕ್ತರ ಮತ್ತು ಕಲ್ಯಾಣ ಕರ್ನಾಟಕದ ಜನರ ಮತ್ತು ವಿಶ್ವಾದ್ಯಂತ ಇರುವ ಶರಣರ ಕನಸು ನನಸು ಮಾಡಲು ಸರ್ವ ಪ್ರಯತ್ನ ಮಾಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next