Advertisement

ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ

11:24 AM Mar 27, 2023 | keerthan |

ವಿಜಯಪುರ: ಮಹಾರಾಷ್ಟ್ರದ ಸೋಲಾಪುರಗೆ ಹೊರಟಿದ್ದ ಲಾರಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 49.90 ಲಕ್ಷ ರೂ. ಹಣವನ್ನು ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ.

Advertisement

ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಚೆಕ್ ಪೋಸ್ಟ್ ನಲ್ಲಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಸಂಚರಿಸುತ್ತಿದ್ದ ಲಾರಿಯನ್ನು ಪರಿಶೀಲಿಸುತ್ತಿದ್ದಾಗ ದಾಖಲೆ ಇಲ್ಲದ 49.90 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.

ಪ್ರಕರಣದ ಸಂಬಂಧ ಬೆಂಗಳೂರು ಮೂಲದ ಸೈಯದ್, ಜಮೀಲ್ ಹಾಗೂ ರಂಗಸ್ವಾಮಿ ಎಂಬ ಮೂವರನ್ನು ನಗದು ಸಹಿತ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಪಾಕ್ ಗೆ ಸರಣಿ ಸೋಲಿನ ಅವಮಾನ: ಐತಿಹಾಸಿಕ ಸಾಧನೆ ಮಾಡಿದ ಅಫ್ಘಾನಿಸ್ಥಾನ

ವಶಕ್ಕೆ ಪಡೆದಿದ್ದ ಮೂವರ ವಿರುದ್ಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next