ಬೆಂಗಳೂರು: ನಗರದಲ್ಲಿ ಪಾಲಿಕೆ ಮತ್ತಷ್ಟು ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆ ಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಈಗಾಗಲೇ ಪ್ರತಿಯೊಂದು ವಾರ್ಡ್‌ನಲ್ಲಿ 1 ಇಂದಿರಾ ಕ್ಯಾಂಟೀನ್ ತೆರೆಯುವ ನಿಟ್ಟಿನ ಕಾರ್ಯ ನಿರ್ವಹಿಸುತ್ತಿರುವ ಪಾಲಿಕೆ, ಇದೀಗ ಜನನಿಬಿಡ ಸ್ಥಳಗಳಲ್ಲಿ ಮತ್ತಷ್ಟು ಇಂದಿರಾ ಕ್ಯಾಂಟೀನ್ ತೆರೆಯುವ ಉದ್ದೇಶ ಹೊಂದಿದೆ.
ಬಡವರ ಮತ್ತು ಕೂಲಿ ಕಾರ್ಮಿಕರ ಹಸಿವು ನೀಗಿಸುವ ನಿಟ್ಟಿನಲ್ಲಿ ಹೊಸ ಕ್ಯಾಂಟೀನ್ ನಿರ್ಮಾಣಕ್ಕಾಗಿ ಜಾಗದ ಹುಡುಕಾಟದಲ್ಲಿ ನಿರತವಾಗಿದೆ. ಜನನಿಬಿಡ ಬಸ್ ನಿಲ್ದಾಣ ಮತ್ತು ಆಸ್ಪತ್ರೆಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ತೆರೆಯುವ ಪಾಲಿಕೆ ಸ್ಥಳದ ಹುಡುಕಾಟದಲ್ಲಿ ನಿರತವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸುತ್ತಮುತ್ತಲಿನ ಬಸ್ ನಿಲ್ದಾಣಗಳು ಮತ್ತು ಆಸ್ಪತ್ರೆಗಳಂತಹ ಜನನಿಬಿಡ ಪ್ರದೇಶಗಳಲ್ಲಿ ಇನ್ನೂ 25 ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಸ್ಥಳದ ಹುಡುಕಾಟ ನಡೆದಿದೆ ಅಧಿಕಾರಿಗಳು ಎಂದು ಹೇಳಿದ್ದಾರೆ.
50 ಹೊಸ ಇಂದಿರಾ ಕ್ಯಾಂಟೀನ್: ನಾಡ ಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಟ್ಯಾಕ್ಸಿ ಕ್ಯಾಬ್ ಚಾಲಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಈ ಕ್ಯಾಂಟೀನ್ ಸವಲತ್ತನ್ನು ಕ್ಯಾಬ್ ಚಾಲಕರು ಮತ್ತು ಕಾರ್ಮಿಕರು ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜಧಾನಿ ವ್ಯಾಪ್ತಿಯಲ್ಲಿ 50 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ಬಿಬಿಎಂಪಿ ನಿರ್ಧರಿಸಿದೆ.
ಈ ಸಂಬಂಧ ಈಗಾಗಲೇ 42 ಸ್ಥಳಗಳನ್ನು ಗುರುತಿಸಿದೆ. ಇನ್ನೂ ಎಂಟು ಸ್ಥಳಗಳನ್ನು ನಿಗದಿಪಡಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸ್ತುತ 200 ಕ್ಯಾಂಟೀನ್: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಮಾಡಲಾಗಿರುವ ಕ್ಯಾಂಟೀನ್ ಸೇರಿದಂತೆ ಬಿಬಿ ಎಂಪಿ ವ್ಯಾಪ್ತಿಯಲ್ಲಿ 200 ಕ್ಯಾಂಟೀನ್‌ಗಳಿವೆ. ಇದರಲ್ಲಿ 23 ಮೊಬೈಲ್ ಕ್ಯಾಂಟೀನ್‌ಗಳಿವೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಸಂಚಾರಿ ಕ್ಯಾಂಟೀನ್‌ಗಳ ದುರಸ್ತಿ ಹಾಗೂ ಇತರೆ ಕೆಲಸಗಳನ್ನು ಕೈಗೊಳ್ಳಲು ಕ್ರಮಕೈಗೊಳ್ಳುವಂತೆ ವಲಯ ಕಚೇರಿಗಳಿಗೆ ಇತ್ತೀಚೆಗೆ ತಿಳಿಸಲಾಗಿತ್ತು. ಗುತ್ತಿಗೆದಾರರಿಂದ ನೌಕರರಿಗೆ ವೇತನ ಪಾವತಿ ವಿಳಂಬ ಸೇರಿದಂತೆ ವಿವಿಧ ಕಾರಣಗಳಿಂದ ಸುಮಾರು 10 ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
–ದೇವೇಶ ಸೂರಗುಪ್ಪ