Advertisement

ಕರ್ನಾಟಕ ಬಂದ್ ಗೆ ಹಾವೇರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

02:32 PM Sep 28, 2020 | sudhir |

ಹಾವೇರಿ: ರೈತಪರ ಸಂಘಟನೆಗಳಿಂದ ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಂಘಟನೆಗಳು ಮೆರವಣಿಗೆ ಹಾಗೂ ಪ್ರತಿಭಟನೆಗೆ ಬಂದ್ ಸೀಮಿತಗೊಳಿಸಿದರು.

Advertisement

ಬೆಳಗ್ಗೆಯಿಂದಲೇ ಜನಜೀವನ ಎಂದಿನಂತಿತೆ ಕಂಡು ಬಂದಿತು. ಪ್ರತಿಭಟನೆ ನಡೆದ ಸ್ಥಳದಲ್ಲಿ ವರ್ತಕರು ಸ್ವಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದರು. ನಗರದ ಉಳಿದೆಡೆ ಬಹುತೇಕ ವ್ಯಾಪಾರ ವಹಿವಾಟು ಎಂದಿನಂತೆ ಸಾಗಿತು.
ಅಟೋ, ಬಸ್ ಸಂಚಾರ ಎಂದಿನಂತೆ ಕಾರ್ಯ ನಿರ್ವಹಿಸಿದರೂ ಕೂಡ ಜನರ ಸಂಚಾರ ಅಷ್ಟಾಗಿ ಕಂಡು ಬರಲಿಲ್ಲ.

ನಗರದ ಹುಕ್ಕೇರಿಮಠದಿಂದ ಆರಂಭಗೊಂಡ ವಿವಿಧ ಸಂಘಟನೆಗಳ ಪ್ರತಿಭಟನಾ ಮೆರವಣಿಗೆ ಎಂ.ಜಿ.ರಸ್ತೆ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಬಂದು ಜಮಾಯಿಸಿತು. ನಂತರ ಪ್ರತಿಭಟನಾಕಾರರು ರೈತ ವಿರೋಧಿ ಕಾಯ್ದೆಗಳನ್ನು ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಇದನ್ನೂ ಓದಿ :ಬಾಬಾ ಬುಡನ್ ಗಿರಿ ಗುಹೆಯೊಳಗೆ ಸಚಿವ ಸಿ.ಟಿ ರವಿಯಿಂದ ಕಾನೂನು ಉಲ್ಲಂಘನೆ?

ವಿವಿಧ ಕನ್ನಡಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದವು. ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದರು.

Advertisement

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತರು ಅರೆಬೆತ್ತಲೆ ಹಾಗೂ ಕೊರಳಿಗೆ ಕುಣಿಕೆ ಹಾಕಿಕೊಳ್ಳುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ಮಾಡುತ್ತಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು.  ಪ್ರತಿಭಟನೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next