ಅಸ್ಸಾಂ: ಆರೋಗ್ಯ ಇಲಾಖೆ ಸಿಬ್ಬಂದಿ ನೀಡಿದ ಐರನ್-ಫೋಲಿಕ್ ಆಸಿಡ್ ಮಾತ್ರೆಗಳನ್ನು ಸೇವಿಸಿದ ಐವತ್ತಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಅಸ್ಸಾಂನ ಚರೈಡಿಯೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಪತ್ಸಾಕು ಬ್ಲಾಕ್ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಟೌ ಉಪ ಕೇಂದ್ರದ ಆರೋಗ್ಯ ಕಾರ್ಯಕರ್ತರ ತಂಡ ಖೇರಾನಿಪಥರ್ ಪ್ರಾಥಮಿಕ ಶಾಲೆಯ 75 ಮತ್ತು ನಿಮಾಲಿಯಾ ಪ್ರಾಥಮಿಕ ಶಾಲೆಯ 26 ವಿದ್ಯಾರ್ಥಿಗಳಿಗೆ ಐಎಫ್‌ಎ ಮಾತ್ರೆಗಳನ್ನು ವಿತರಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾತ್ರೆ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಸೋನಾರಿ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಿ ಬಳಿಕ ಮನೆಗೆ ಕಳುಹಿಸಿಕೊಡಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಶಿಕ್ಷಕರ ಸಮ್ಮುಖದಲ್ಲಿ ಮಾತ್ರೆಗಳನ್ನು ವಿತರಿಸಲಾಗಿದ್ದು, ಮಕ್ಕಳು ಖಾಲಿ ಹೊಟ್ಟೆಯಲ್ಲಿ ಮಾತ್ರೆ ಸೇವಿಸಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಧರ್ಮಸ್ಥಳ ಮೇಳದ ತಿರುಗಾಟ ಆರಂಭ: ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ