Advertisement

ಸಂತ್ರಸ್ತ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ಭರವಸೆ

02:21 PM Oct 23, 2021 | Team Udayavani |

ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದ ಮೃತ ಪಾಲಮ್ಮಳ ಕುಟುಂಬಕ್ಕೆ ಡಾ| ಅಂಬೇಡ್ಕರ್‌ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಂಗಮೇಶ ಪೂಜಾರಿ ಸಾಂತ್ವನ ಹೇಳಿ, ನಿಗಮದ ವತಿಯಿಂದ 50 ಸಾವಿರ ರೂ. ಧನ ಸಹಾಯ ನೀಡುವುದಾಗಿ ಭರವಸೆ ನೀಡಿದರು.

Advertisement

ಕಾಮುಕನೊಬ್ಬ ಪಾಲಮ್ಮಳ ಮೇಲೆ ಪೆಟ್ರೋಲ್‌ ಸುರಿದು, ಬೆಂಕಿ ಹಚ್ಚಿ ಕೊಲೆ ಮಾಡಿದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಕುಟುಂಕ್ಕೆ ಸಾಂತ್ವನ ಹೇಳಿದ್ದೇವೆ. ಈ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು. ಇಲಾಖೆಯಿಂದ ಸಿಗಬಹುದಾದ ಎಲ್ಲ ಸೌಲಭ್ಯಗಳನ್ನು ಸಂತ್ರಸ್ತ ಕುಟುಂಬಕ್ಕೆ ಒದಗಿಸಲಾಗುವುದು ಎಂದು ಸುದ್ದಿಗಾರರಿಗೆ ಹೇಳಿದರು.

ಮೃತಳ ಕುಟುಂಬದವರು ಮತ್ತು ಸಮುದಾಯದ ಸಂಘಟನೆಯವರು ಸಂತ್ರಸ್ತ ಕುಟುಂಬಕ್ಕೆ 2 ಎಕರೆ ಜಮೀನು ನೀಡಬೇಕು. ನಿಗಮದ ಭೂ ಒಡೆತನ ಯೋಜನೆ ಅಡಿಯಲ್ಲಿ ಇದಕ್ಕೆ ಅವಕಾಶವಿದೆ ಎಂದರು. ಇದಕ್ಕೆ ಸ್ಪಂದಿಸಿದ ವ್ಯವಸ್ಥಾಪಕರು, ಸಂತ್ರಸ್ತರು ಅರ್ಜಿ ಸಲ್ಲಿಸಲಿ. ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ತಾಲೂಕು ಅಭಿವೃದ್ಧಿ ಅಧಿಕಾರಿ ಮಹಾದೇವ ಅಸ್ಕಿ, ಸಿಬ್ಬಂದಿ ಸಾಗರ, ಮಾದಿಗ ದಂಡೋರ ತಾಲೂಕು ಅಧ್ಯಕ್ಷ ನಾಗರಾಜ ಹೋಕುಳಿ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಭೀಮಾಶಂಕರ ಬಿಲ್ಲವ್‌, ಹಣಮಂತ ಕಟ್ಟಿಮನಿ, ಭೀಮಣ್ಣ ದಿವಳಗುಡ್ಡ, ಮೌನೇಶ ಬಾದ್ಯಾಪುರ, ಮಾರ್ಥಂಡಪ್ಪ ಈ ಸಂದರ್ಭದಲ್ಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next