ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 50040 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಶನಿವಾರ 51667 ಪ್ರಕರಣಗಳು ಪತ್ತೆಯಾಗಿದ್ದವು.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿದ ಮಾಹಿತಿಯಂತೆ ಈ ಅವಧಿಯಲ್ಲಿ ದೇಶದಲ್ಲಿ 1258 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದ ಸೋಂಕಿತರ ಸಾವಿನ ಸಂಖ್ಯೆ 3,95,751ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಯೋಗೇಶ್ವರ್ ದೆಹಲಿ ಭೇಟಿ ನಿಗೂಢ; ಯಾರನ್ನೂ ಭೇಟಿಯಾಗದೆ ವಾಪಾಸು ಬಂದ ಸಚಿವ
ದೇಶದಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 3,02,33,183 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,944 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 2,92,51,029ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 5.86,403 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ದೇಶದಲ್ಲಿ ಕೇವಲ ಐದು ರಾಜ್ಯಗಳಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದೆ. ಕೇರಳ ರಾಜ್ಯದಲ್ಲಿ 12,118 ಪ್ರಕರಣಗಳು ಪತ್ತೆಯಾಗಿದ್ದರೆ, ಮಹಾರಾಷ್ಟ್ರದಲ್ಲಿ 9812 ಪ್ರಕರಣಗಳು ಪತ್ತೆಯಾಗಿವೆ. ತಮಿಳುನಾಡಿನಲ್ಲಿ 5415 ಪ್ರಕರಣಗಳು, ಕರ್ನಾಟಕದಲ್ಲಿ 4272 ಪ್ರಕರಣಗಳು ಮತ್ತು ಆಂಧ್ರ ಪ್ರದೇಶ ರಾಜ್ಯದಲ್ಲಿ 4147 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.