Advertisement
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಜೂಮ್ ಮೀಟಿಂಗ್ ಮೂಲಕ ನಡೆದ ಲಸಿಕಾ ಮೇಳ ಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement
ಇದನ್ನೂ ಓದಿ: 200 ಕೋಟಿ ವೆಚ್ಚದಲ್ಲಿ ಕಲಾಗ್ರಾಮ ಸ್ಥಾಪನೆ ಯೋಜನೆ
ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1000 ಲಸಿಕೆಗಳನ್ನು ಪೂರ್ಣಗೊಳಿಸುವ ಹಾಗೂ ಕಡಿಮೆ ಪ್ರಗತಿ ಸಾಧಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 1500, ನಗರ ಪ್ರದೇಶದ ಆರೋಗ್ಯ ಕೇಂದ್ರಗಳಿಗೆ 7500 ಲಸಿಕೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಜಿಲ್ಲಾಧಿಕಾರಿಗಳು ನೀಡಿದರು. ಹೀಗಾಗಿ ಬೆಳಿಗ್ಗೆ 6ಗಂಟೆಯಿಂದಲೇ ಲಸಿಕಾಕರಣ ಪ್ರಾರಂಭಿಸಿ ಗುರಿ ತಲುಪಲು ಪೂರ್ಣ ಪ್ರಮಾಣದಲ್ಲಿ ಲಸಿಕಾ ಕಾರ್ಯಕ್ರಮ ನಡೆಸಬೇಕು. ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಪಿಡಿಒಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ತಪ್ಪದೇ ಲಸಿಕೆಗಳನ್ನು ಪೂರ್ಣಗೊಳಿಸಿ ಕಡ್ಡಾಯವಾಗಿ ಡಾಟಾ ಎಂಟ್ರಿ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಇಂದುಮತಿ ಪಾಟೀಲ್, ಆರ್‌ಸಿಎಚ್‌ಒ ಲಕ್ಷ್ಮೀಕಾಂತ ಒಂಟಿಪೀರ, ಜಿಲ್ಲಾ ನೋಡಲ್ ಅಧಿಕಾರಿ ಡಾ| ಸಾಕ್, ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ| ಭಗವಂತ ಅನ್ವರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪ್ರಭಾಕರ್ ಕವಿತಾಳ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಬಕ್ಕಪ್ಪ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.