Advertisement

50 ಸಾವಿರ ಜನರಿಗೆ ಲಸಿಕಾ ಗುರಿ: ಡಿಸಿ

10:35 AM Oct 22, 2021 | Team Udayavani |

ಯಾದಗಿರಿ: ಜಿಲ್ಲೆಯಲ್ಲಿ ಮಹಾ ಲಸಿಕಾ ಮೇಳ ಅ.22ರಂದು ಆಯೋಜಿಸಲಾಗಿದ್ದು, 50 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ತಿಳಿಸಿದರು.

Advertisement

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಜೂಮ್‌ ಮೀಟಿಂಗ್‌ ಮೂಲಕ ನಡೆದ ಲಸಿಕಾ ಮೇಳ ಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿ ಪ್ರಾಥಮಿಕ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಉಪ ಆರೋಗ್ಯ ಕೇಂದ್ರ, ಗ್ರಾಪಂಗಳಲ್ಲಿ ಲಸಿಕಾಕರಣ ನಡೆಯಲಿದೆ. ಲಸಿಕಾಕರಣ ಪೂರ್ಣಗೊಳಿಸುವ ಗುರಿ ನೀಡಲಾಗಿದೆ. ಹೀಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ತಾಲೂಕುವಾರು ನಿಯೋಜಿತ ತಂಡಗಳಿಗೆ ಪೂರ್ವ ತಯಾರಿ ಸಭೆ ನಡೆಸುವಂತೆ ಸಲಹೆ ನೀಡಿದರು.

ಕಳೆದ ಲಸಿಕಾ ಮೇಳಗಳಂತೆ ಈ ಬಾರಿಯ ಲಸಿಕಾ ಮೇಳವೂ ನಿರೀಕ್ಷಿತ ಮಟ್ಟದ ಯಶಸ್ವಿಗೆ ಎಲ್ಲಾ ಅಧಿಕಾರಿಗಳ ಸಹಕಾರದ ಜೊತೆಗೆ ಸಮಯನ್ವಯದಿಂದ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಲಸಿಕಾ ಮೇಳಕ್ಕೆ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಜನರನ್ನು ಲಸಿಕಾ ಕೇಂದ್ರಕ್ಕೆ ಕರೆತರಲು ಮತ್ತು ಲಸಿಕೆಗಳ ಕೊರತೆಯಾಗದಂತೆ ಉತ್ತಮ ರೀತಿಯಲ್ಲಿ ಸರಬರಾಜು ಮಾಡುವಂತೆ ಮತ್ತು ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ತಹಶೀಲ್ದಾರರಿಗೆ ಸೂಚಿಸಿದರು.

Advertisement

ಇದನ್ನೂ ಓದಿ: 200 ಕೋಟಿ ವೆಚ್ಚದಲ್ಲಿ ಕಲಾಗ್ರಾಮ ಸ್ಥಾಪನೆ ಯೋಜನೆ

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1000 ಲಸಿಕೆಗಳನ್ನು ಪೂರ್ಣಗೊಳಿಸುವ ಹಾಗೂ ಕಡಿಮೆ ಪ್ರಗತಿ ಸಾಧಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 1500, ನಗರ ಪ್ರದೇಶದ ಆರೋಗ್ಯ ಕೇಂದ್ರಗಳಿಗೆ 7500 ಲಸಿಕೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಜಿಲ್ಲಾಧಿಕಾರಿಗಳು ನೀಡಿದರು. ಹೀಗಾಗಿ ಬೆಳಿಗ್ಗೆ 6ಗಂಟೆಯಿಂದಲೇ ಲಸಿಕಾಕರಣ ಪ್ರಾರಂಭಿಸಿ ಗುರಿ ತಲುಪಲು ಪೂರ್ಣ ಪ್ರಮಾಣದಲ್ಲಿ ಲಸಿಕಾ ಕಾರ್ಯಕ್ರಮ ನಡೆಸಬೇಕು. ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಪಿಡಿಒಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ತಪ್ಪದೇ ಲಸಿಕೆಗಳನ್ನು ಪೂರ್ಣಗೊಳಿಸಿ ಕಡ್ಡಾಯವಾಗಿ ಡಾಟಾ ಎಂಟ್ರಿ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಇಂದುಮತಿ ಪಾಟೀಲ್‌, ಆರ್‌ಸಿಎಚ್‌ಒ ಲಕ್ಷ್ಮೀಕಾಂತ ಒಂಟಿಪೀರ, ಜಿಲ್ಲಾ ನೋಡಲ್‌ ಅಧಿಕಾರಿ ಡಾ| ಸಾಕ್‌, ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ| ಭಗವಂತ ಅನ್ವರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪ್ರಭಾಕರ್‌ ಕವಿತಾಳ, ಯಾದಗಿರಿ ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಬಕ್ಕಪ್ಪ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next