Advertisement

ಕ್ರೀಡಾ ಇಲಾಖೆಗೆ 500 ಕೋಟಿ ಮೀಸಲು

07:41 AM Feb 04, 2019 | Team Udayavani |

ಕಲಬುರಗಿ: ರಾಜ್ಯದ ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಸಲಕರಣೆ ಹಾಗೂ ಕ್ರೀಡಾಂಗಣ ಅಭಿವೃದ್ಧಿ ಪಡಿಸಲು ಕ್ರೀಡಾ ಇಲಾಖೆಗೆ 500 ಕೋಟಿ ರೂ.ಗಳಿಗಿಂತಲೂ ಹೆಚ್ಚಿನ ಅನುದಾನವನ್ನು ಮುಂಬರುವ ಆಯವ್ಯಯದಲ್ಲಿ ಒದಗಿಸಲು ಮನವಿ ಸಲ್ಲಿಸಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಸಚಿವ ರಹೀಂಖಾನ್‌ ತಿಳಿಸಿದರು.

Advertisement

ನಗರದ ಚಂದ್ರಶೇಖರ ಪಾಟೀಲ್‌ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಸ್ಪರ್ಧಿಸಿದ ಕ್ರೀಡಾಪಟುಗಳಿದ್ದು ಅವರಿಗೆ ಉನ್ನತ ತಂತ್ರಜ್ಞಾನದ ಸಕಲಕರಣೆ ಹಾಗೂ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಿ ನೀಡುವ ಅವಶ್ಯಕತೆ ಇದೆ ಎಂದರು.

ಗ್ರಾಮೀಣ ಪ್ರದೇಶದ ಪ್ರತಿಭೆಗಳು ಕ್ರೀಡೆಗಳಿಗೆ ಹೆಚ್ಚಾಗಿ ಬರುತ್ತಿದ್ದಾರೆ. ಅವರಿಗೆ ಜಿಲ್ಲಾ ಮಟ್ಟದಲ್ಲಿ ಉನ್ನತ ದರ್ಜೆಯ ವಸತಿ ನಿಲಯಗಳನ್ನು ಕಲ್ಪಿಸುವ ಮೂಲಕ ಪೌಷ್ಟಿಕ ಆಹಾರ ಒದಗಿಸುವ ಅವಶ್ಯಕತೆ ಇದೆ. ಗ್ರಾಮೀಣ ಯುವಕರು ಉತ್ತಮ ದೇಹಧಾಡ್ಯರ್ತೆ ಹೊಂದಿದ್ದು ಯಾವುದೇ ಕ್ರೀಡೆಗೂ ಸ್ಪರ್ಧಿಸುವ ಅವಕಾಶಗಳನ್ನು ಹೊಂದಿರುತ್ತಾರೆ ಎಂದು ಹೇಳಿದರು. ಕಲಬುರ್ಗಿ ಮತ್ತು ಬೀದರ ಭಾಗಗಳಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಸ್ಪರ್ಧಿಸಿದ ಕ್ರೀಡಾಪಟುಗಳಿದ್ದಾರೆ. ಅವರೆಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಯಶಾಲಿಯಾಗಲು ಉನ್ನತ ದರ್ಜೆಯ ಸವಲತ್ತುಗಳನ್ನು ಒದಗಿಸಿದಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಿದ್ಧತೆಗಳನ್ನು ಮಾಡಲು ಅನುಕೂಲವಾಗುವುದು ಎಂದರು. ಕಲಬುರಗಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ನಾಂದ್ರೆ, ಅಮೃತ ಅಷ್ಟಗಿ, ಯಾದಗಿರಿ ಜಿಲ್ಲೆ ಸಹಾಯಕ ನಿರ್ದೇಶಕ ಸಿ.ಕೆ. ಕುಳಗೇರಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next