Advertisement

ಮಳೆ ಹಾನಿ; ಮೂಲಭೂತ ಸೌಕರ್ಯ ಮರುಸ್ಥಾಪಿಸಲು 500 ಕೋಟಿ ರೂ ಬಿಡುಗಡೆ

03:25 PM Jul 15, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ದೇವನಹಳ್ಳಿ ಬಳಿ ಇರುವ ಖಾಸಗಿ ಹೋಟೆಲ್ ನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಮಳೆ ಹಾನಿ ಕುರಿತು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳ ಜತೆ ಸಭೆ ನಡೆಸಿ, ಕೂಡಲೇ ಮೂಲಭೂತ ಸೌಕರ್ಯ ಮರುಸ್ಥಾಪಿಸಲು 500 ಕೋಟಿ ರೂ ಬಿಡುಗಡೆ ಮಾಡಲು ಆದೇಶ ಹೊರಡಿಸಿದ್ದಾರೆ.

Advertisement

ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗವಾಡಿ ವಿದ್ಯುತ್ ಕಂಬ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೆ ಒಳಗಾಗಿವೆ. ಈ ಹಾನಿಯನ್ನು ಜಿಲ್ಲಾಧಿಕಾರಿಗಳು ವರದಿ ಮಾಡಿದ್ದಾರೆ.ಕೆಲ ದಿನಗಳ ಹಿಂದೆ ನಾನು ಕೆಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೆ, ಆ ಸಂದರ್ಭದಲ್ಲಿ ಈ ಹಾನಿಯನ್ನು ನಾನು ಸ್ವತಃ ವೀಕ್ಷಣೆ ಮಾಡಿದ್ದೇನೆ. ತ್ವರಿತ ಗತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಯಥಾಸ್ಥಿತಿಗೆ ತರಬೇಕಾಗಿದೆ. ಇದಕ್ಕಾಗಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ ಎಂದು, ಕೂಡಲೇ 500 ಕೋಟಿ ಹಣವನ್ನು ಬಿಡುಗಡೆ ಮಾಡಲು ಈ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಿಪತ್ತು ಪರಿಹಾರ ಘಟಕದ ಡಾ. ಮನೋಜ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next