Advertisement
ಆರೋಪಿಗಳು ಸುಮಾರು 500ಕ್ಕೂ ಅಧಿಕ ಮಂದಿಗೆ ಸುಮಾರು 15-18 ಕೋಟಿ ರೂ. ವಂಚಿಸಿದ್ದಾನೆ ಎಂದು ಹೇಳಲಾಗಿದೆ. ಆದರೆ, ಆತನ ಖಾತೆ ಪರಿಶೀಲಿಸಿದಾಗ ಸುಮಾರು 2.5 ಕೋಟಿ ರೂ. ಹಣ ಇರುವುದು ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು. ಆರೋಪಿಗಳ ಪೈಕಿ ಮಂಜು ನಾಥ್ ಬಿಲ್ಲಾ ನಾಯಕ್ ಕೆಎಸ್‌ಆರ್‌ಟಿಸಿ ಚಾಲಕನಾಗಿದ್ದು, ತನ್ನ ಸ್ನೇಹಿತರನ್ನು ಮಧ್ಯವರ್ತಿಗಳ ನ್ನಾಗಿ ಮಾಡಿಕೊಂಡು ದಂಧೆ ನಡೆಸುತ್ತಿದ್ದ.
Related Articles
Advertisement
ಅದಕ್ಕಾಗಿ ಕಾರೊಂದನ್ನು ಖರೀದಿಸಿ ಅದಕ್ಕೆ ಕರ್ನಾಟಕ ಸರ್ಕಾರದ ನಾಮಫಲಕ ಹಾಕಿಕೊಂಡು ಉತ್ತರ ಕರ್ನಾಟಕದಲ್ಲಿ ತನ್ನ ಸ್ನೇಹಿತರ ಜತೆ ಸುತ್ತಾಡುತ್ತಿ ದ್ದ. ಈ ವೇಳೆ ಪರಿಚಯವಾಗುವ ಮತ್ತು ಕರ್ತವ್ಯದ ವೇಳೆಯಲ್ಲಿ ಪರಿಚಯವಾಗುವ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಕೆಎಸ್ ಆರ್‌ಟಿಸಿಯಲ್ಲಿ ಟ್ರಾಫಿಕ್ ಇನ್ಸ್‌ಪೆಕ್ಟರ್ ಉದ್ಯೋಗ ಕೊಡಿಸುವುದಾಗಿ ನಂಬಿಸುತ್ತಿದ್ದ.
ಬಳಿಕ ಅವರಿಂದ ಹಣ ವಸೂಲಿ ಮಾಡಿಕೊಂಡು ನಾಪತ್ತೆಯಾಗುತ್ತಿದ್ದ. ಇದುವರೆಗೂ ಸುಮಾರು 500 ಮಂದಿಗೆ ಸುಮಾರು 15ರಿಂದ 18 ಕೋಟಿ ರೂ. ವಂಚಿಸಿದ್ದಾನೆ ಎಂದು ಹೇಳಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಮಧ್ಯವರ್ತಿಗಳಿಂದ ವಸೂಲಿ– ಹಣ ವಸೂಲಿಗೆಂದೇ ಆರೋಪಿ ಸುಮಾರು 30 ಮಂದಿ ಸ್ನೇಹಿತರನ್ನು ಮಧ್ಯವರ್ತಿಗಳನ್ನಾಗಿ ನೇಮಿಸಿಕೊಂಡಿದ್ದಾನೆ. ಸರ್ಕಾರ ಮತ್ತು ಇಲಾಖೆಯಲ್ಲಿಹಿರಿಯ ಅಧಿಕಾರಿಗಳು, ರಾಜಕೀಯ ಮುಖಂಡರು ಪರಿಚಯವಿದ್ದಾರೆ ಎಂದು ನಂಬಿಸುತ್ತಿದ್ದ.
ನಂಬಿದ ಸಾರ್ವಜನಿಕರಿಂದ ಹಣ ವಸೂಲಿಗೆ ಮಧ್ಯವರ್ತಿಗಳನ್ನು ಕಳುಹಿಸುತ್ತಿದ್ದ. ನಂತರ ಸ್ನೇಹಿತರಿಗೆ ಇಂತಿಷ್ಟು ಹಣ ಕೊಡುತ್ತಿದ್ದ. ಆದರೆ, ಆರೋಪಿ ಬಳಿ ಯಾವುದೇ ಆಸ್ತಿ-ಪಾಸ್ತಿ ಇಲ್ಲ. ಅಕ್ರಮವಾಗಿ ಸಂಪಾದಿಸಿದ ಹಣವನ್ನು ಮೋಜು-ಮಸ್ತಿ ಮಾಡಿ ಕಳೆದಿದ್ದಾನೆ ಎಂದು ಪೊಲೀಸರು ಹೇಳಿದರು.