Advertisement

5 ಸಾವಿರ ಕೋಟಿ ಬಿಡುಗಡೆಗೆ ಮನವಿ

12:42 AM Aug 30, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ನೆರೆ ಹಾಗೂ ಬರ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ 5 ಸಾವಿರ ಕೋಟಿ ರೂ. ಮಧ್ಯಂತರ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯ ಕಾಂಗ್ರೆಸ್‌ ಮನವಿ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಪ್ರಧಾನಿಗೆ ಮನವಿ ಸಲ್ಲಿಸಿದರು.

Advertisement

ರಾಜ್ಯದಲ್ಲಿನ ಪ್ರವಾಹದಿಂದ ಲಕ್ಷಾಂತರ ಕೋಟಿ ರೂಪಾಯಿ ಆಸ್ತಿ ಹಾನಿಯಾಗಿರುವುದರಿಂದ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ತಕ್ಷಣವೇ ಶೀಘ್ರವೇ ವೈಮಾನಿಕ ಸಮೀಕ್ಷೆ ನಡೆಸಬೇಕು. ಪ್ರವಾಹ ಪರಿಹಾರಕ್ಕಾಗಿ ತಕ್ಷಣ ಮಧ್ಯಂತರ ಪರಿಹಾರವಾಗಿ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಹಾಗೂ ಬರ ಪರಿಹಾರಕ್ಕೂ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next