Advertisement
ನಗರದ ಸಾರಕ್ಕಿಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದಾನಿ ವಿ.ಎಸ್.ರೆಡ್ಡಿ ಅವರು ನಿರ್ಮಾಣ ಮಾಡಿರುವ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿರುವ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಸರ್ಕಾರಿ ಶಾಲೆಯಲ್ಲಿ 15ರಿಂದ 20 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಹಿಂದೆಯೇ 10 ಸಾವಿರ ಶಿಕ್ಷಕರ ನೇಮಕಕ್ಕೆ ಮುಂದಾಗಿದ್ದರೂ, ಭರ್ತಿಯಾಗಿದ್ದು 3 ಸಾವಿರ ಶಿಕ್ಷಕರು. ಗುಣಮಟ್ಟದ ಕಲಿಕೆಗೆ ಅನುಕೂಲವಾಗುವಂತೆ ಶೀಘ್ರವೇ 5 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಿದ್ದೇವೆ ಎಂದರು.
Related Articles
Advertisement
ಬ್ರಿಟಿಷ್ ಬಯೋಲಾಜಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವಿ.ಎಸ್.ರೆಡ್ಡಿ ಮಾತನಾಡಿ, ನಾನು ಈ ಶಾಲೆಯಲ್ಲಿ ವ್ಯಾಸಂಗ ಮಾಡಿ ಈ ಹಂತಕ್ಕೆ ಏರಿದ್ದೇನೆ. ಸರ್ಕಾರಿ ಶಾಲೆಯಲ್ಲಿ ಓದಿದವರೇ ಹೆಚ್ಚು ಉನ್ನತ ಸ್ಥಾನದಲ್ಲಿದ್ದಾರೆ. ಖಾಸಗಿ ಶಾಲೆಗಳಲ್ಲಿ ಓದಿದವರು ಖಾಸಗಿ ಕಂಪನಿಗಳಲ್ಲಿ ಮ್ಯಾನೇಜರ್ ಆಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ ಶಾಲೆಗಳನ್ನು ಕೀಳಾಗಿ ನೋಡುವ ದೃಷ್ಟಿ ಬದಲಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಯಲ್ಲಿ 2.25 ಕೋಟಿ ರೂ.ವೆಚ್ಚದಲ್ಲಿ ಅಬ್ಬಯ್ಯ ಸ್ಮಾರಕಭವನ ನಿರ್ಮಾಣ ಮಾಡಿದ್ದು, 12 ಕೊಠಡಿಗಳು, ಕಂಪ್ಯೂಟರ್ ಲ್ಯಾಬ್, 4 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಎಸ್.ಕೆ.ನಟರಾಜ್, ಶಾಸಕಿ ಸೌಮ್ಯ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಸಂಗಪ್ಪ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಜೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪ್ರಕಾಶ್ ಇದ್ದರು.