Advertisement

ಅಪಘಾತದಲ್ಲಿ ಒಂದೇ ದಿನ 51 ಸಾವು; ರಸ್ತೆ ನಿಯಮ ಪಾಲನೆಗೆ ಎಚ್‌ಡಿಕೆ ಮನವಿ

11:14 PM May 27, 2024 | Team Udayavani |

ಬೆಂಗಳೂರು: ಅತಿ ವೇಗ, ಅಜಾಗರೂಕತೆಯಿಂದಲೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಅಂಶ ಆಘಾತಕಾರಿ. ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Advertisement

ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ ವಿವಿಧೆಡೆ ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ 51 ಜನರು ಪ್ರಾಣ ಕಳೆದುಕೊಂಡಿರುವ ಸುದ್ದಿಯ ಬಗ್ಗೆ ಆಘಾತ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ರಸ್ತೆ ಸುರಕ್ಷೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್‌ ವ್ಯವಸ್ಥೆ ಕೂಡ ರಸ್ತೆ ಸುರûಾ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು. ರಸ್ತೆ ಸುರಕ್ಷೆ ಬಗ್ಗೆ ಪೊಲೀಸರ ಜವಾಬ್ದಾರಿ ಜತೆಗೆ ನಾಗರಿಕರ ಹೊಣೆಗಾರಿಕೆ ಇರುತ್ತದೆ ಎನ್ನುವುದನ್ನು ಯಾರೂ ಮರೆಯಬಾರದು. ಅತಿ ವೇಗದಿಂದ ಒಂದು ಜೀವ ಹೋದರೆ ಒಂದು ಕುಟುಂಬವೇ ಅನಾಥವಾಗುತ್ತದೆ ಎನ್ನುವುದನ್ನು ನೆನಪಿಡಬೇಕು ಎಂದು ಅವರು ಹೇಳಿದ್ದಾರೆ.

ದುರಂತಗಳಲ್ಲಿ ಜೀವ ಕಳೆದುಕೊಂಡ ಎಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಕುಟುಂಬಗಳಿಗೆ ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next