Advertisement

Karnataka: 51 ಶಾಸಕರು, 21 ಎಂಎಲ್‌ಸಿಗಳು ಇನ್ನೂ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿಲ್ಲ

09:43 PM Nov 30, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ 51 ಶಾಸಕರು, 21 ವಿಧಾನ ಪರಿಷತ್‌ ಸದಸ್ಯರು ಗಡುವು ಮುಗಿದರೂ ಲೋಕಾಯುಕ್ತ ಸಂಸ್ಥೆಗೆ ತಮ್ಮ ಆಸ್ತಿ ವಿವರ ಸಲ್ಲಿಸದೇ ನಿಯಮ ಉಲ್ಲಂಘಿಸಿದ್ದಾರೆ.

Advertisement

ಆಯ್ಕೆಯಾದ ಮೂರು ತಿಂಗಳೊಳಗೆ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂಬ ನಿಯಮವಿದೆ. ಆದರೆ, ಈ ಬಾರಿ 51 ಶಾಸಕರು, 21 ವಿಧಾನ ಪರಿಷತ್‌ ಸದಸ್ಯರು ಇದುವರೆಗೂ ಲೋಕಾಯುಕ್ತ ಕಚೇರಿಗೆ ಆಸ್ತಿ ವಿವರವನ್ನು ಸಲ್ಲಿಸಿಲ್ಲ. ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರುಗಳನ್ನು ಪಟ್ಟಿ ಮಾಡಿ ಲೋಕಾಯುಕ್ತ ಸಂಸ್ಥೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ಈ ಬಾರಿ ಸಚಿವರಾದ ಜಮೀರ್‌ ಅಹಮದ್‌ ಖಾನ್‌, ರಾಮಲಿಂಗಾ ರೆಡ್ಡಿ, ಕೆ.ಎಚ್‌.ಮುನಿಯಪ್ಪ, ರಹೀಂಖಾನ್‌, ಕೆ.ಎನ್‌.ರಾಜಣ್ಣ ಆಸ್ತಿ ವಿವರ ಸಲ್ಲಿಸಿಲ್ಲ. ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಮುರುಗೇಶ್‌ ನಿರಾಣಿ ಸೇರಿ ಹಲವು ಜನಪ್ರತಿನಿಧಿಗಳು ಜೂನ್‌ 30ರ ಬಳಿಕ ಗಡುವು ಮುಗಿದ ನಂತರ ಆಸ್ತಿ ವಿವರ ಸಲ್ಲಿಸಿದ್ದಾರೆ. ರಾಜ್ಯದ 224 ಶಾಸಕರಿಗೆ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತರು ಜೂನ್‌ 30 ರವರೆಗೆ ಗಡುವು ನೀಡಿದ್ದರು. ಜೊತೆಗೆ ಎಲ್ಲ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ… ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮೌಖೀಕ ಸೂಚನೆ ಕೊಟ್ಟಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next