ಡೊಂಬಿವಲಿ: ಐದು ದಶಕಗಳ ಹಿಂದೆ ನಮ್ಮ ಹಿರಿಯರು ನೆಟ್ಟ ಡೊಂಬಿವಲಿ ಕರ್ನಾಟಕ ಸಂಘ ಎಂಬ ಪುಟ್ಟ ಸಸಿ ಇವತ್ತು ಶಿಕ್ಷಣ ಕ್ಷೇತ್ರದಲ್ಲಿ ಜ್ಞಾನ ದಾಸೋಹದ ಮೂಲಕ ಮುಂಬಯಿ ಹಾಗೂ ಉಪನಗರಗಳಲ್ಲಿ ಗಮನ ಸೆಳೆದಿದ್ದರೂ, ಮುಂಬರುವ ದಿನಗಳಲ್ಲಿ ತಮ್ಮೆಲ್ಲರ ಸಹಾಯ, ಸಹಕಾರದಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಬೇಕು. ಸಂಘಟ ನೆಯನ್ನು ಇನ್ನಷ್ಟು ಬಲಗೊಳಿಸಿ ತುಳು-ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸುವತ್ತ ದಿಟ್ಟ ಹೆಜ್ಜೆ ಇಡಬೇಕು ಎಂದು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ನುಡಿದರು.
ನ. 18 ರಂದು ಸಂಜೆ ಡೊಂಬಿವಲಿ ಪೂರ್ವದ ಕರ್ನಾಟಕ ಸಂಘ ಡೊಂಬಿವಲಿ ಸಂಚಾಲಕತ್ವದ ಮಂಜುನಾಥ ವಿದ್ಯಾಲಯದ ಸಭಾಗೃಹದಲ್ಲಿ ನಡೆದ ಸಂಘದ 51 ನೇ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಯೋಚನೆ ಸಂಘದ್ದಾಗಿದ್ದು, ಕರ್ನಾಟಕ ಸಂಘ ಸಂಚಾ ಲಿತ ಮಂಜುನಾಥ ವಿದ್ಯಾಲಯ ಹಾಗೂ ಮಹಾವಿದ್ಯಾ ಲಯದ ಸಾಧನೆ ಅಭಿನಂದನೀ ಯವಾಗಿದೆ. ಕಳೆದ ವರ್ಷ ಸಂಘದ ಸುವರ್ಣ ಮಹೋತ್ಸವದಲ್ಲಿ 15 ಸರಣಿ ಕಾರ್ಯಕ್ರಮಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಕಾರ್ಯಕಾರಿ ಸಮಿತಿಯ ಶ್ರಮ ಅಪಾರವಾಗಿದೆ. ಯಾವುದೇ ಸಂಸೆœಯ ಕಾರ್ಯಗಳು ನಿಂತ ನೀರಾಗದೆ, ಹರಿಯುವ ನದಿಯಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ಕಾರ್ಯಕಾರಿ ಸಮಿತಿಯು ಶ್ರದ್ಧೆಯಿಂದ ಕಾರ್ಯನಿರ್ವಹಿಸಿ ಸಂಘದ ಹೆಸರನ್ನು ಮತ್ತಷ್ಟು ಬೆಳೆಯುವಂತೆ ಮಾಡಬೇಕು ಎಂದರು.
ಸಂಘದ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಗುಣಮಟ್ಟದ ಶಿಕ್ಷಣದ ಮೂಲಕ ಚಿರಪರಿಚಿತವಾಗಿರುವ ನಮ್ಮ ಶಿಕ್ಷಣ ಸಂಸ್ಥೆಗಳ ಸಾಧನೆಗೆ ವಿಶೇಷವಾಗಿ ಕನ್ನಡ ಮಾಧ್ಯಮದ ಶಿಕ್ಷಕರ ಪರಿಶ್ರಮ ಅಪಾರವಾಗಿದೆ. ಮುಂಬರುವ ದಿನಗಳಲ್ಲಿ ಕ್ರೀಡಾಂಗಣಕ್ಕಾಗಿ ನಿವೇಶನ ಖರೀದಿಸುವ ಯೋಜನೆ ಸಂಘದ್ದಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಪ್ರಯತ್ನ ನಡೆದಿದೆ. ಡೊಂಬಿವಲಿ ಕರ್ನಾಟಕ ಸಂಘದ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆಗೈದು ನಾಡು-ನುಡಿಯ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂಘದ ಅಭಿವೃದ್ಧಿಯ ಹರಿಕಾರರಾದ ಸದಸ್ಯ ಬಾಂಧವರ ಸಹಕಾರ ನಿರಂತರವಾಗಿಲಿ ಎಂದು ನುಡಿದರು.
ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್ ಎಲ್. ಕುಲಾಲ್ ಅವರು ಗತ ಸಾಲಿನ ವರದಿ ವಾಚಿಸಿದರು. ಜತೆ ಕೋಶಾಧಿಕಾರಿ ರಮೇಶ್ ಕಾಖಂಡಕಿ ಅವರು ಆಯವ್ಯಯ ಪಟ್ಟಿಯನ್ನು ಮಂಡಿಸಿದರು. ಸಂಘದ ಹಿರಿಯ ಸದಸ್ಯರಾದ ವಸಂತ ಕಲಕೋಟಿ, ರವಿ ಸನಿಲ್, ಹೇಮಾ ಹೆಗ್ಡೆ, ಶೇಖರ್ ಅಮೀನ್, ಜಿ. ವಿ. ಹೆಗ್ಡೆ, ಮೋಹನ್ ಪೈ, ಮುರಳಿ ಶೆಟ್ಟಿ, ರವಿ ಸುವರ್ಣ ಮೊದಲಾದವರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು.
ಹೇಮಾ ಹೆಗ್ಡೆ ಪ್ರಾರ್ಥನೆಗೈದರು. ಪದಾಧಿ ಕಾರಿಗಳು ದೀಪಪ್ರಜ್ವಲಿಸಿ ಮಹಾಸಭೆಗೆ ಚಾಲನೆ ನೀಡಿದರು. ವೇದಿಕೆಯಲ್ಲಿ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ, ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ, ಕೋಶಾಧಿಕಾರಿ ಲೋಕನಾಥ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಡಾ| ವಿಜಯ ಎಂ. ಶೆಟ್ಟಿ, ಕಾರ್ಯ ದರ್ಶಿ ದೇವದಾಸ್ ಎಲ್. ಕುಲಾಲ್, ಲೆಕ್ಕ ಪರಿ ಶೋಧಕ ವಸಂತ ಕುಮಾರ್,ಯು. ಪಿ. ಪೈ, ಜತೆ ಕಾರ್ಯದರ್ಶಿ ರಮೇಶ್ ಕಾಖಂಡಕಿ ಉಪಸ್ಥಿತರಿದ್ದರು.
ಸಂಘದ ಪದಾಧಿಕಾರಿಗಳಾದ ಮಹಿಳಾ ವಿಭಾದಗ ಕಾರ್ಯಾಧ್ಯಕ್ಷೆ ಸುಷ್ಮಾ ಡಿ. ಶೆಟ್ಟಿ, ಪ್ರಭಾಕರ ಶೆಟ್ಟಿ, ಸನತ್ ಕುಮಾರ್ ಜೈನ್, ಎಸ್. ಎನ್. ಸೋಮಾ, ಮಾಧುರಿಕಾ ಬಂಗೇರ, ರಾಜೀವ ಭಂಡಾರಿ, ಆಶಾ ಶೆಟ್ಟಿ, ಯೋಗಿನಿ ಶೆಟ್ಟಿ, ವಸಂತ ಸುವರ್ಣ, ಸತೀಶ್ ಆಲಗೂರ ಮೊದಲಾದವರು ಸಹಕರಿಸಿದರು. ಸಂಘದ ಗೌರವ ಕಾರ್ಯದರ್ಶಿ ದೇವದಾಸ್ ಎಲ್. ಕುಲಾಲ್ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ : ಗುರುರಾಜ ಪೋತನೀಸ್.