Advertisement
ಚತುರ್ದಾನ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಬುಧವಾರ 6.45ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನೆರವೇರಿದ 52ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಶುಭಕೋರಿದರು.
ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಸಾಮೂಹಿಕ ವಿವಾಹ ಅಂದರೆ ಸರಳ ವಿವಾಹ. ವರದಕ್ಷಿಣೆ ಪಿಡುಗು ಮತ್ತು ಮದುವೆ ಗಾಗುವ ದುಂದುವೆಚ್ಚ ಕಡಿಮೆಯಾಗಿದೆ. ಇಲ್ಲಿ ಮದುವೆ ಆದವರ ಎರಡು ಮೂರನೇ ಪೀಳಿಗೆ ಇಲ್ಲಿ ವಿವಾಹಕ್ಕೆ ಬರುತ್ತಿದ್ದಾರೆ. ಕೇವಲ ಬಡ ವರು ಮಾತ್ರವಲ್ಲದೆ ಆರ್ಥಿಕ ಸದೃಢರೂ ವಿವಾಹವಾಗುತ್ತಿದ್ದಾರೆ ಎಂದರೆ ಇದುವೇ ಸಾಮಾ ಜಿಕ ಪರಿವರ್ತನೆ ಎಂದು ತಿಳಿಸಿದರು.
Related Articles
ಹಳ್ಳಿಯ ಹುಡುಗ/ಹುಡುಗಿ ಎಂಬ ಕಾರಣಕ್ಕೆ ವಿವಾಹ ತಿರಸ್ಕೃತವಾಗುತ್ತದೆ. ಆದರೆ ಇಂದು ಹಳ್ಳಿಗಳು ಸಾಕಷ್ಟು ಅಭಿವೃದ್ಧಿಯಾಗಿವೆ ಎಂದು ಹೇಳಿದರು.
Advertisement
ಹಳ್ಳಿ ತ್ಯಜಿಸಿ ಪಟ್ಟಣ ಸೇರುವ ಸಂಸ್ಕೃತಿ ಬರಬಾರದು. ನಾವು ನಮ್ಮ ನಡತೆ, ಪಾವಿತ್ರ್ಯವನ್ನು ಉಳಿಸಿಕೊಂಡು ಜೀವನ ಸಾಗಿಸಬೇಕು. ನೂತನ ದಂಪತಿ ಸತ್ಸಂಗ ಮಾಡಿ ಸಂಸಾರವನ್ನು ಹೊಣೆಗಾರಿಕೆ ಮತ್ತು ಜವಾಬ್ದಾರಿಯಿಂದ ಅರ್ಥಪೂರ್ಣವಾಗಿ ನಿರ್ವಹಿಸಬೇಕು ಎಂದರು.
ಹೇಮಾವತಿ ವೀ. ಹೆಗ್ಗಡೆ, ಶಾಂತಾ ದೊಡ್ಡಣ್ಣ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ರತ್ನವರ್ಮ ಜೈನ್ ವಂದಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತು ಪೂಜಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.ಡಾ| ಸುನಿಲ್ ಪಂಡಿತ್ ದಾಂಪತ್ಯ ದೀಕ್ಷೆ ನೆರವೇರಿಸಿದರು.
ಸಾಮಾಜಿಕ ಬದ್ಧತೆ ಬೆಳೆಯಲಿಜೀವನದಲ್ಲಿ ಆಶ್ರಯ, ಆಹಾರ, ಬದುಕು ಕೊಟ್ಟವರನ್ನು ಎಂದೂ ಮರೆಯಬಾರದು. ತಾಯಿ-ತಂದೆ ಮಾಡಿದ ದಾನ-ಧರ್ಮ, ಸತ್ಕಾರ್ಯದ ಪುಣ್ಯಅವರ ಮಕ್ಕಳಿಗೂ ಲಭಿಸುತ್ತದೆ. ಯಾವುದೇ ನೀತಿ, ಧರ್ಮ, ಸಂಸ್ಕಾರ ಕಲಿಯಲು ವಯಸ್ಸಿನ ಮಿತಿ ಇಲ್ಲ. ಪ್ರೀತಿ-ವಿಶ್ವಾಸ, ಪರೋಪಕಾರ ಸೇವಾ ಕಳಕಳಿ, ಸಾಮಾಜಿಕ ಬದ್ಧತೆ ಮೊದಲಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ನಟ ದೊಡ್ಡಣ್ಣ ಸಲಹೆ ನೀಡಿದರು. 12,900ನೇ ವಿಶೇಷ ಜೋಡಿ
ಬೈಕ್ ಅಪಘಾತದಿಂದ ಕಾಲು ಕಳೆದುಕೊಂಡ ಗದಗದ ಪ್ರವೀಣ ಖನ್ನೂರು ಅವರನ್ನು ಕವಿತಾ ಗಿಡಕೆಂಚಣ್ಣವರ್ ಪರಸ್ಪರ ಪ್ರೀತಿಸಿ ಮದುವೆಗೆ ಒಪ್ಪಿದ್ದು ಅವರಿಗೆ 12,900ನೇ ಜೋಡಿ ಎಂಬ ವಿಶೇಷ ಮಾನ್ಯತೆಯೊಂದಿಗೆ ಪ್ರತ್ಯೇಕ ವೇದಿಕೆ ನಿರ್ಮಿಸುವ ಮೂಲಕ ಗಣ್ಯರು ಹರಸಿದರು. -ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರು ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆಧೋತಿ, ಶಾಲು ವಿತರಿಸಿದರು.
-ವಧೂ-ವರರ ಜೋಡಿ ಮದುವೆ ದಿಬ್ಬಣವಾಗಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಆಗಮಿಸಿದರು.
-ಮುಹೂರ್ತಕ್ಕೆ ಅರ್ಧಗಂಟೆ ಮುಂಚಿತವಾಗಿ ಹೆಗ್ಗಡೆ ದಂಪತಿ ಮತ್ತು ಚಲನಚಿತ್ರ ನಟ ದೊಡ್ಡಣ್ಣ ದಂಪತಿ ಮಂಗಳಸೂತ್ರ ವಿತರಿಸಿದರು. ಆಯಾಜಾತಿ-ಮತ ಸಂಪ್ರದಾಯದಂತೆ ಧಾರ್ಮಿಕ ವಿಧಿ- ವಿಧಾನಗಳನ್ನು ನಡೆಸಲಾಯಿತು.
-39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ 23 ಜಿಲ್ಲೆಗಳ ಹಾಗೂ ತಮಿಳುನಾಡಿನ 1 ಜೋಡಿ ಸೇರಿ ಒಟ್ಟು 123 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.
-1972ರಿಂದ ಈವರೆಗೆ 12,900 ಜೋಡಿ ಸಾಮೂಹಿಕ ವಿವಾಹದಲ್ಲಿ ಸತಿಪತಿಯರಾದರು.