ಉಡುಪಿ: ಜಿಲ್ಲೆಯಲ್ಲಿ ಸೋಮವಾರ 53 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಜಿಲ್ಲೆಯ ಕೋವಿಡ್19 ಸೋಂಕಿತರ ಸಂಖ್ಯೆ 1661ಕ್ಕೆ ಏರಿಕೆಯಾಗಿದೆ.
ಕುಂದಾಪುರದಲ್ಲಿ ಇಬ್ಬರು ಪೊಲೀಸರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಪವಿಭಾಗ ಕಚೇರಿಯ ಓರ್ವ ಪೊಲೀಸ್ ಸಿಬ್ಬಂದಿ, ಹೈವೇ ಪ್ಯಾಟ್ರೋಲ್ ಕರ್ತವ್ಯದಲ್ಲಿದ್ದ ಎಎಸ್ ಐ ಮತ್ತು ಅವರ ಕಾರು ಚಾಲಕನಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಜಿಲ್ಲೆಯಲ್ಲಿಂದು 313 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆದಿದ್ದು, ಅದರಲ್ಲಿ 260 ಮಾದರಿಗಳ ವರದಿ ನೆಗೆಟಿವ್ ಆಗಿದ್ದರೆ, 53 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಎಂದು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸೋಂಕು ದೃಢವಾದ 1661 ಮಂದಿಯಲ್ಲಿ 1280 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 378 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Related Articles
ಜಿಲ್ಲೆಯಲ್ಲಿ ಇದುವರೆಗೆ 22,533 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಅದರಲ್ಲಿ 19,123 ಜನರ ವರದಿ ನೆಗಟಿವ್ ಬಂದಿದೆ. 1661 ಮಂದಿಯ ವರದಿ ಪಾಸಿಟಿವ್ ಆಗಿದೆ. ಜಿಲ್ಲೆಯಲ್ಲಿ ಇನ್ನೂ 1749 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲು ಬಾಕಿಯಿದೆ.