ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಇಂದು 53 ಜನರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ.
ಉಡುಪಿ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ವೈದ್ಯರು ಮತ್ತು ನಾಲ್ವರು ಸಿಬ್ಬಂದಿಗಳಿಗೂ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರೊಂದಿಗೆ ಉಡುಪಿ ನಗರಸಭೆಯ ಇಬ್ಬರು ಸದಸ್ಯೆಯರಿಗೆ ಕೂಡಾ ಕೋವಿಡ್ ಸೋಂಕು ಪತ್ತೆಯಾಗಿದೆ.
ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1382 ಮಂದಿ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 401 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿಂದು 885 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 832 ಜನರ ವರದಿ ನೆಗೆಟಿವ್ ಆಗಿದೆ. 53 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ ಕೋವಿಡ್ ಸೋಂಕು ತಾಗಿರುವುದು ಕಂಡು ಬಂದಿದೆ.
ಇದನ್ನೂ ಓದಿ: ಉಡುಪಿ ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು, ನಾಲ್ಕು ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ದೃಢ
ಜಿಲ್ಲೆಯಲ್ಲಿ ಇದುವರೆಗೆ 23,108 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಅವರಲ್ಲಿ 20,667 ಜನರ ವರದಿ ಫಲಿತಾಂಶ ನೆಗೆಟಿವ್ ಆಗಿದೆ. 1786 ಜನರ ವರದಿ ಪಾಸಿಟಿವ್ ಆಗಿದೆ. ಇನ್ನೂ 655 ವರದಿ ಫಲಿತಾಂಶ ಬಾಕಿ ಇದೆ.